ಬೆಂಗಳೂರು ಗ್ರಾಮಾಂತರ

ವಿಜ್ಞಾನವು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸಿಸುತ್ತೆ

Published On :

ಟಿ. ನರಸೀಪುರ: ವಿಜ್ಞಾನ ವಿಚಾರಗೋಷ್ಠಿಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸನಗೊಳಿಸಲು ಸಹಕಾರಿಯಾಗುತ್ತದೆ ಎಂದು ಬಿಇಒ ಮರಿಸ್ವಾಮಿ ಹೇಳಿದರು.
ಪಟ್ಟಣದ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಚೇರಿಯಲ್ಲಿ ತಾಲೂಕಿನ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ವಿಜ್ಞಾನ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು, ವೈಚಾರಿಕ ನೆಲೆಗಟ್ಟಿನಲ್ಲಿ ವಿಚಾರಗಳ ಅರಿವು ಮೂಡಿಸಲು ಕಲಿಕೆ ಹಂತದಲ್ಲಿಯೇ ವಿಚಾರಗೋಷ್ಠಿಗಳು ಪೂರಕವಾಗಿವೆ ಎಂದರು.
ದೇಶದ ಬೆನ್ನೆಲುಬಾದ ಕೃಷಿಗೆ ಅವೈಜ್ಞಾನಿಕವಾಗಿ ರಸಗೊಬ್ಬರ ಮತ್ತು ಕೀಟನಾಶಕಗಳನ್ನು ಹೆಚ್ಚಾಗಿ ಹಾಕುವ ಮೂಲಕ ಜಿಡ್ಡುಗಟ್ಟಿ ಹೋಗುವಂತೆ ನಾವೆಲ್ಲರೂ ಮಾಡಿಬಿಟ್ಟಿದ್ದೇವೆ. ಪ್ರಸ್ತುತ ಕೃಷಿ ಕ್ಷೇತ್ರವೂ ಸತ್ವಯುತ ಫಸಲು ನೀಡುವುದು ಕಡಮೆಯಾಗಿದೆ. ಕಲುಷಿತಗೊಂಡ ಕೃಷಿಯನ್ನು ಪರಿಶುದ್ಧಗೊಳಿಸಲು ನಾವಿನ್ಯತೆಗಳ ಪ್ರಯೋಗ ನಡೆಯುತ್ತಿದೆ. ಎಲ್ಲ ವಿದ್ಯಾರ್ಥಿಗಳು ವಿಚಾರಗೋಷ್ಠಿಯಲ್ಲಿ ಉತ್ಸುಕತೆಯಿಂದ ಭಾಗವಹಿಸಬೇಕೆಂದು ಅವರು ಮನವಿ ಮಾಡಿದರು.
ವಿಚಾರಗೋಷ್ಠಿಯಲ್ಲಿ ಉತ್ತಮವಾಗಿ ವಿಚಾರ ಮಂಡಿಸಿದ ಪಟ್ಟಣದ ಶಿವಾನಂದಶರ್ಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀಲಕ್ಷ್ಮೀ ಪ್ರಥಮ, ಸೇಂಟ್ ಮೇರಿಸ್ ಪ್ರೌಢಶಾಲೆಯ ರುಚಿತಾ ಆರ್.ವಿ.ಗೌಡ ದ್ವಿತೀಯ ಹಾಗೂ ಮಾವಿನಹಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ರವಿಕಿರಣ್ ತೃತೀಯ ಬಹುಮಾನ ಪಡೆದುಕೊಂಡರು.
ಬಿಇಓ ಕಚೇರಿ ವ್ಯವಸ್ಥಾಪಕ ಸಿದ್ದಲಿಂಗಪ್ಪ, ಮುಖ್ಯ ಶಿಕ್ಷಕ ನಟರಾಜು, ತೀರ್ಪುಗಾರರಾದ ವಿಶ್ವನಾಥ್, ಪಿ. ಮಂಜುಳ, ಮಹದೇವಸ್ವಾಮಿ, ಶಿಕ್ಷಣ ಸಂಯೋಜಕರಾದ ಮಹದೇವಸ್ವಾಮಿ, ನಂಜುಂಡಸ್ವಾಮಿ, ಶಿವಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.