ಕನ್ನಡ ವಿರೋಧಿ ಶಾಸಕರ, ಎಂಇಎಸ್ ಮುಖಂಡರ ಬಂಧನಕ್ಕೆ ಪ್ರತಿಭಟನೆ, ಅಣುಕು ಶವಯಾತ್ರೆ
ಮದ್ದೂರು: ಮರಾಠಿಗರ ಪುಂಡಾಟಿಕೆ ವಿರೋಧಿಸಿ ಯಳ್ಳೂರು ಚಲೋ ಹೊರಟಿದ್ದ ಜಯಕರ್ನಾಟಕ ಸಂಘಟನೆಯ ಮುಖಂಡರನ್ನು ಬಂಧಿಸಿರುವುದನ್ನು ವಿರೋಧಿಸಿ ಸಂಘಟನೆಯ ಕಾರ್ಯಕರ್ತರು ಪಟ್ಟಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಬಳಿ ಜಮಾಯಿಸಿದ ಜಯಕರ್ನಾಟಕ ಸಂಘಟನೆಯ ಕಾರ್ಯಕರ್ತರು ರಸ್ತೆ ತಡೆ ಚಳವಳಿ ನಡೆಸಿದರು. ಕಾರ್ಯಕರ್ತರ ಪ್ರತಿಭಟನೆಯಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ವಾಹನಗಳ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಎಂಇಎಸ್ ಶಾಸಕ ಸಂಬಾಜಿ ಪಾಟೀಲ್ ಹಾಗೂ ಶಿವಸೇನೆ ಶಾಸಕ ದಿವಾಕರ ರಾವಳೆ ಹಾಗೂ ಅವರ ಬೆಂಬಲಿಗರ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಕನ್ನಡಾಂಬೆಯ ಅಣುಕು ಶವಯಾತ್ರೆ ನಡೆಸಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ ಸುಟ್ಟುಹಾಕಿರುವುದನ್ನು ವಿರೋಧಿಸಿ ಮಳ್ಳೂರು ಚಲೋ ಹೊರಟಿದ್ದ ಜಯಕರ್ನಾಟಕ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಎಸ್. ನಾರಾಯಣ್, ಜಿಲ್ಲಾಕಾರ್ಯದರ್ಶಿ ಯೋಗಾನಂದ ಹಾಗೂ ತಾಲೂಕು ಅಧ್ಯಕ್ಷ ಸುಧೀರ್ ಅವರುಗಳನ್ನು ಬೆಳಗಾವಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ ಪೋಲಿಸರು ಬಂಧಿಸಿರುವುದನ್ನು ಖಂಡಿಸಿದರು. ಪೊಲೀಸರು ಬಂಧಿತ ಸಂಘಟನೆಯ ಮುಖಂಡರನ್ನು ಈ ಕೂಡಲೇ ಬಿಡುಗಡೆ ಮಾಡಬೇಕು ಇಲ್ಲವಾದಲ್ಲಿ ಉಗ್ರಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಎಂ. ಮಹೇಶ್, ಕುಮಾರ, ಸುರೇಶ್, ಮನು, ಪ್ರಭಾಕರ, ಸೋಮು, ಮಹಮ್ಮದ್, ಶೇಖರ್, ಪ್ರಸನ್ನ, ನಾಗೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

