ಬೆಂಗಳೂರು ಗ್ರಾಮಾಂತರ

ಶಿಕ್ಷಣದಿಂದ ಬಡತನ ನಿರ್ಮೂಲನೆ

Published On :

ನೆಲಮಂಗಲ: ಸಮಾಜದಲ್ಲಿ ಬಡತನ ನಿರ್ಮೂಲನೆಯಾಗಬೇಕಾದರೆ ಮುಂದಿನ ಪೀಳಿಗೆಯ ಮಕ್ಕಳು ವಿದ್ಯಾವಂತರಾದಾಗ ಮಾತ್ರ ಸಾಧ್ಯವಾಗುತ್ತದೆ ಎಂದು ಟಿ. ಬೇಗೂರು ಜಿ.ಪಂ. ಸದಸ್ಯ ಬಿಎಂಎಲ್ ಕಾಂತರಾಜು ಹೇಳಿದರು.ಅವರು ಶನಿವಾರ ತಾಲೂಕಿನ ಯಲಚಗೆರೆ ಗ್ರಾಮದಲ್ಲಿ ಶ್ರೀ ಮುನೇಶ್ವರಸ್ವಾಮಿ ವಾರ್ಷಿಕೋತ್ಸವ ಸಮಾರಂಭದಲ್ಲಿ ಸರ್ಕಾರಿ ಶಾಲೆಯ 150 ಜನ ವಿದ್ಯಾರ್ಥಿಗಳಿಗೆ ದಾನಿಗಳಾದ ಹೊಯ್ಸಳಸೇನೆ ಹನುಮಂತರಾಜು ನೀಡಿದ ಉಚಿತ ಸಮವಸ್ತ್ರ ವಿತರಿಸಿ ಮಾತನಾಡಿ, ಮಕ್ಕಳಲ್ಲಿ ಉತ್ತಮ ಸಂಸ್ಕಾರ ಮನೋಭಾವ ಮೂಡಿಸಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಹೊಣೆಗಾರಿಕೆ ಪೋಷಕರು ಹಾಗೂ ಶಿಕ್ಷಕರ ಕರ್ತವ್ಯ ಎಂದು ತಿಳಿಸಿದರು.ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸರ್ಕಾರ ನೀಡುವ ಸೌಲಭ್ಯ ಸಮರ್ಪಕವಾಗಿ ಬಳಕೆಯಾದರೆ ವಿದ್ಯಾಭ್ಯಾಸ ಗುಣಮಟ್ಟ ಹೆಚ್ಚುವುದರೊಂದಿಗೆ ಉತ್ತಮ ಜೀವನ ನಿರ್ಮಾಣಕ್ಕೆ ತಳಪಾಯವಾಗುತ್ತದೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಎಂಬಿಟಿ ರಾಮಕೃಷ್ಣಪ್ಪ ನುಡಿದರು.
ವೇದಿಕೆಯಲ್ಲಿ ಸಾಹಿತಿ ಬಿದಲೂರು ಸೋಮಶೇಖರ್, ಹೊಯ್ಸಳ ಸೇನೆ ಜಿಲ್ಲಾಧ್ಯಕ್ಷ ರಂಗಸ್ವಾಮಿ, ತಾಲೂಕು ಅಧ್ಯಕ್ಷ ಹನುಮಂತರಾಜು, ವಿದ್ಯಾರ್ಥಿ ಘಟಕದ ಅಧ್ಯಕ್ಷ ಗೋವರ್ಧನ್, ಮಹೇಶ್, ಶಾಲಾ ಮುಖ್ಯ ಶಿಕ್ಷಕ ಬಸಣ್ಣ ಇದ್ದರು.

ಮರಳಿ ಶಾಲೆಗೆ ಕಳುಹಿಸಿ ಜಾಥಾ
ವಿಜಯಪುರ:  ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕಳುಹಿಸಿ ಎಂಬ ಜಾಥಾ ಕಾರ್ಯಕ್ರಮ ಇಲ್ಲಿನ ಸರ್ಕಾರಿ ಹೆಣ್ಣು ಮಕ್ಕಳ ಶಾಲಾ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರ್ಥಿಗಳು ಕಟೌಟ್‌ಗಳನ್ನು ಹಿಡಿದುಕೊಂಡು ಮಕ್ಕಳನ್ನು ಶಾಲೆಗೆ ಕಳುಹಿಸಿ, ಶಿಕ್ಷಣ ಜನ್ಮ ಸಿದ್ಧ  ಹಕ್ಕು ಎಂಬುವ ಘೋಷಣೆಗಳನ್ನು ಕೂಗಿಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು. ಇದೇ ಸಂಧರ್ಭದಲ್ಲಿ ಮಾತನಾಡಿದ ಮುಖ್ಯೋಪಾಧ್ಯಯ ಮನೋಹರ್ ಅವರು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕಳುಹಿಸುವ ಬಗ್ಗೆ ಪೋಷಕರಿಗೆ ಅರಿವು ಮೂಡಿಸಲು ಇಲಾಖೆಯು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
 ಯಾವೊಬ್ಬ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವುದು ಇದರ ಉದ್ದೇಶವಾಗಿದೆ ಎಂದರು. ಮಕ್ಕಳು ಶಿಕ್ಷಣ ಹೊಂದಲೆಂದು ಸರ್ಕಾರವು ಬಹಳಷ್ಟು ಯೋಜನೆಗಳನ್ನು ರೂಪಿಸಿದೆ. ಇಂತವುಗಳ ಬಗ್ಗೆ ಪೋಷಕರು ಅರಿತುಕೊಳ್ಳಬೇಕು ಮತ್ತು ಕಡ್ಡಾಯವಾಗಿ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸಿಕೊಡಬೇಕು ಎಂದು ತಿಳಿಸಿದರು. '
ಶಾಲೆಯ ಪುರಸಭಾ ಸದಸ್ಯ ಆರ್.ಸಿ. ಮಂಜುನಾಥ್  ಎಸ್.ಡಿ.ಎಮ್.ಸಿ ಅಧ್ಯಕ್ಷೆ ದೀಪಾ ರಮೇಶ್ ಹಾಗೂ ಸದಸ್ಯರು, ಶಾಲಾ ಶಿಕ್ಷಕ ವೃಂದ ಹಾಜರಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.