ಬೆಂಗಳೂರು ಗ್ರಾಮಾಂತರ

'ಸ್ವಾತಂತ್ರ್ಯ ದಿನ ಅರ್ಥಪೂರ್ಣವಾಗಿರಲಿ'

Published On :

ಕನಕಪುರ: ರಾಷ್ಟ್ರೀಯ ಹಬ್ಬ ಸ್ವಾತಂತ್ರ್ಯ ದಿನಾಚರಣೆಯನ್ನು ಎಲ್ಲಾ ನಾಗರಿಕರೂ ಹಾಗೂ ಅಧಿಕಾರಿಗಳು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಬೆಂಗ್ರಾ ಲೋಕಸಭಾ ಸದಸ್ಯ ಡಿ.ಕೆ. ಸುರೇಶ್ ಹೇಳಿದ್ದಾರೆ.
ಅವರು ಕನಕಪುರದ ತಾಪಂ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ತಹಸೀಲ್ದಾರ್ ಹನುಮಂತಪ್ಪ ಅಧ್ಯಕ್ಷತೆ ವಹಿಸಿದ್ದರು. ಆಂಗ್ಲರ ದಾಸ್ಯದಿಂದ ವಿಮೋಚನೆ ಪಡೆದು ಸ್ವಾತಂತ್ರ್ಯ ಗಳಿಸಬೇಕಾದರೆ ಸಾವಿರಾರು ಜನರ ತ್ಯಾಗ ಬಲಿದಾನಗಳಾಗಿವೆ. ಅವರನ್ನು ಸ್ಮರಿಸುವುದರೊಂದಿಗೆ ಸೂಕ್ತ ಗೌರವ ಸಲ್ಲಿಸಬೇಕು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶಾಲಾ ವಿದ್ಯಾರ್ಥಿಗಳು, ಎನ್‌ಸಿಸಿ,
ಎನ್‌ಎಸ್‌ಎಸ್, ಸ್ಕೌಟ್, ಗೈಡ್ಸ್‌ಗಳ ಪಥಸಂಚಲನ ನಡೆಯಬೇಕು. ಯಾವುದೇ ಅಧಿಕಾರಿ ಸಮಾರಂಭಕ್ಕೆ ಗೈರುಹಾಜರಾದರೆ ಅವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ ಡಿ.ಕೆ.ಸುರೇಶ್, ಸಮಾರಂಭದಲ್ಲಿ ಪಾಲ್ಗೊಳ್ಳುವ ಮಕ್ಕಳು ಮಧ್ಯಾಹ್ನದವರೆಗೆ ಹಸಿವೆಯಿಂದ ಬಳಲದಂತೆ ಉಪಹಾರ ವಿತರಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಆದೇಶಿಸಿದರು.
ಸಮಾರಂಭದ ಅಂಗವಾಗಿ 10 ಮಂದಿ ನಿಧನರಾದ ಸ್ವಾತಂತ್ರ್ಯ ಸೇನಾನಿಗಳ ವಿಧವೆಯರಿಗೆ ಸನ್ಮಾನ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ತೀರ್ಮಾನಿಸಲಾಯಿತು. ಸಭೆಯಲ್ಲಿ ವಿಪ  ಮಾಜಿಸದಸ್ಯ ಎಸ್.ರವಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಉಷಾ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಂ.ಡಿ. ವಿಜಯದೇವ್, ತಾಪಂ ಅಧ್ಯಕ್ಷ ಉಮೇಶ್, ಉಪಾಧ್ಯಕ್ಷ ರಂಗಣ್ಣ,ಪುರಸಭಾಧ್ಯಕ್ಷ ರಾಮಚಂದ್ರ, ಉಪಾಧ್ಯಕ್ಷೆ ಹೇಮಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.