ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸಿ
ಕನಕಪುರ: ಕನಕಪುರ ತಾಲೂಕಿನ ಸಾತನೂರು ಗ್ರಾಮದಲ್ಲಿ ಗ್ರಾಮಸಭೆ ಗ್ರಾಪಂ ಅಧ್ಯಕ್ಷ ಎಸ್.ಜೆ. ನಾಗರಾಜು ಅಧ್ಯಕ್ಷತೆಯಲ್ಲಿ ನಡೆಯಿತು.
ಪಿಡಿಓ ಪುಟ್ಟಸ್ವಾಮಿ, ಕಾರ್ಯದರ್ಶಿ ಶಿವಣ್ಣ ಸಭೆಯ ಕಲಾಪಗಳನ್ನು ನಿರ್ವಹಿಸಿದರು. ಗ್ರಾಪಂ ಉಪಾಧ್ಯಕ್ಷೆ ವಸಂತ, ನೋಡಲ್ ಅಧಿಕಾರಿ ಡಾ. ವರದರಾಜ್, ಅಬ್ದುಲ್ ಕಬೀರ್ ಮೊದಲಾದವರು ಪಾಲ್ಗೊಂಡಿದ್ದರು.
ತಾಪಂ ಸದಸ್ಯ ಪ್ರಕಾಶ್ ಮಾತನಾಡಿ ಸರ್ಕಾರ ಜನತೆಯ ಅನುಕೂಲತೆಗಾಗಿ ನೀಡುತ್ತಿರುವ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕ ರೀತಿಯಲ್ಲಿ ಅನುಷ್ಠಾನಗೊಳಿಸಿದಾಗ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು. ಸಭೆಯಲ್ಲಿ ಮಾತನಾಡಿದ ಕಾಳೇಗೌಡನದೊಡ್ಡಿ ನಾಗರಾಜ್ ಅವರು, ಸಾತನೂರು ಹೋಬಳಿಯಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆಯಿಂದ ನಡೆದಿರುವ ಚೆಕ್ ಡ್ಯಾಂಗಳ ನಿರ್ಮಾಣದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ. ಅಗತ್ಯವಿರುವ ಕಡೆಗಳಲ್ಲಿ ಚೆಕ್ ಡ್ಯಾಂ ನಿರ್ಮಿಸದೆ ಬೇಕಾಬಿಟ್ಟಿ ಚೆಕ್ ಡ್ಯಾಂಗಳನ್ನು ನಿರ್ಮಿಸಿ ಅಮೂಲ್ಯ ಸರ್ಕಾರದ ಹಣವನ್ನು ಅಪವ್ಯಯ ಮಾಡಿದ್ದಾರೆ. ಎಷ್ಟೋ ಕಡೆಗಳಲ್ಲಿ ಮಳೆಯಿಂದಾಗಿ ಡ್ಯಾಂಗಳೇ ಕೊಚ್ಚಿಹೋಗಿದ್ದು ಕಳಪೆ ಕಾಮಗಾರಿಗೆ ನಿದರ್ಶನವಾಗಿದೆ, ಎಂದು ಆರೋಪಿಸಿದರು.
ಸೋರೇಕಾಯಿದೊಡ್ಡಿ ಶಿವಮಲ್ಲಯ್ಯ ಮಾತನಾಡಿ, ಇಂದಿಗೂ ಗ್ರಾಮಗಳಲ್ಲಿ ಬಯಲು ಶೌಚಾಲಯ ಪದ್ಧತಿ ನಡೆಯುತ್ತಿದ್ದು ಗ್ರಾಮ ಪಂಚಾಯತ್ಗಳು ನಿರ್ಮಲ ಭಾರತ ಅಭಿಯಾನ ಯೋಜನೆಯನ್ನು ಸರಿಯಾದ ರೀತಿಯಲ್ಲಿ ಗ್ರಾಮಗಳಲ್ಲಿ ಅನುಷ್ಠಾನ ಗೊಳಿಸಬೇಕು, ಮನೆಮನೆಗಳಲ್ಲಿ ಶೌಚಾಲಯ ನಿರ್ಮಿಸಿಕೊಡಬೇಕು, ಎಂದು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

