ಶಾಲಾ ಮಕ್ಕಳಿಗೆ ಶೈಕ್ಷಣಿಕ ಪರಿಕರ ಪೂರೈಸಿ: ಆದೂರು ಪ್ರಕಾಶ್
ಆನೇಕಲ್ಲು: ಸರ್ಕಾರಿ ಶಾಲಾ ಮಕ್ಕಳು ಖಾಸಗಿ ಶಾಲಾ ಮಕ್ಕಳಂತೆ ತಾವೂ ಸಮಾನರು ಎಂಬ ಮನೋಭಾವ ಹೊಂದಲು ಶೈಕ್ಷಣಿಕ ಪರಿಕರಗಳನ್ನು ಪೂರೈಸುವುದು ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ಯುವ ಕವಿ, ಹೋರಾಟಗಾರ ಆದೂರು ಪ್ರಕಾಶ್ ತಿಳಿಸಿದ್ದಾರೆ.
ಅವರು ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ತಾಲೂಕಿನ ಆದೂರು ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ಸ್, ಬ್ಯಾಗ್ಗಳನ್ನು ವಿತರಿಸಿ ಮಾತನಾಡಿದರು. ಎಪಿಎಸಿ ಮಾಜಿ ಅಧ್ಯಕ್ಷ ಮಹದೇವಯ್ಯ ಮಾತನಾಡಿ, ಸ್ಥಿತಿವಂತ ನಾಯಕರು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳಬೇಕೆಂದು ತಿಳಿಸಿದರು.
ಶಿಕ್ಷಕರು ಪಠ್ಯ ವಿಷಯದ ಜೊತೆಗೆ ಪ್ರಚಲಿತ ವಿದ್ಯಾಮಾನಗಳನ್ನು ವಿದ್ಯಾರ್ಥಿಗಳಿಗೆ ತಾರತಮ್ಯವಿಲ್ಲದೇ ಕಲಿಸಬೇಕೆಂದರು.ವೇದಿಕೆಯಲ್ಲಿ ಗ್ರಾಮದಲ್ಲಿ ಶಾಲೆಗೆ ಸ್ಥಳ ದಾನ ಮಾಡಿದ ಹಾಗೂ ಉತ್ತಮ ಸೇವೆ ಸಲ್ಲಿಸಿದವರನ್ನುಸನ್ಮಾನಿಸಲಾಯಿತು.ವೇದಿಕೆಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಮತ್ತಿತರೆ ಮುಖಂಡರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

