ಹಾಸ್ಟೆಲ್‌ನಲ್ಲಿ ಗುಣಮಟ್ಟದ ಊಟ ಒದಗಿಸಿ
ಮಾಗಡಿ: ಹಾಸ್ಟೆಲ್‌ಗಳಲ್ಲಿನ ಮಕ್ಕಳಿಗೆ ಸರಿಯಾದ ಸಮಯಕ್ಕೆ ಗುಣಮಟ್ಟದ ಊಟ ಒದಗಿಸಲು ವಾರ್ಡನ್‌ಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ತಾಲೂಕು ಪಂಚಾಯ್ತಿ ಅಧ್ಯಕ್ಷೆ ಅನುಸೂಯಮ್ಮ ಮರಿಗೌಡ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಅವರು ಮಾಗಡಿ ತಾಲೂಕು ಪಂಚಾಯ್ತಿ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಾಸ್ಟೆಲ್‌ಗಳಿಗೆ ಸೇರುವ ಬಹುತೇಕ ಮಕ್ಕಳು ಬಡ ಕುಟುಂಬದಿಂದ ಬಂದಂತಹವರಾಗಿದ್ದಾರೆ. ಅವರಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಸರಿಯಾದ ಸಮಯಕ್ಕೆ ಊಟ ನೀಡುತ್ತಿಲ್ಲ ಎಂಬುದನ್ನು ನಾನೇ ಕಣ್ಣಾರೆ ಕಂಡು ನೊಂದಿದ್ದೇನೆ. ವಾರ್ಡನ್‌ಗಳು ಜವಾಬ್ದಾರಿಯಿಂದ ಹಾಸ್ಟೆಲ್ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಆಹಾರ ಪೂರೈಕೆ ಮಾಡಲು ಅಗತ್ಯ ಕ್ರಮ ವಹಿಸಬೇಕು. ಇಲ್ಲದಿದ್ದರೆ ಶಿಸ್ತಿನ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ಪತ್ರ ಬರೆಯುವುದಾಗಿ ಎಚ್ಚರಿಸಿದರು.
ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 2013-14 ರಲ್ಲಿ ಗಂಗ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಯಲು ಯಾರು ಮುಂದೆ ಬಂದಿಲ್ಲ. ನೀರು ಸಿಕ್ಕರೆ ಹಣ, ಇಲ್ಲದಿದ್ದರೆ ಹಣ ನೀಡುವುದಿಲ್ಲ ಎಂಬ ನಿಯಮ ಹೇರಿರುವುದರಿಂದ ಕೊಳವೆ ಬಾವಿ ಕೊರೆಯಲು ಯಾರು ಮುಂದೆ ಬಾರದ ಕಾರಣ ಯೋಜನೆ ವಿಫಲವಾಗಿದೆ. 2014-14ನೇ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಬಂಧ ಯೋಜನೆ ರೂಪಿಸಲಾಗುವುದು. ಸ್ವ ಉದ್ಯೋಗ ಕೈಗೊಳ್ಳುವ ಮತ್ತು 2 ಎಕರೆ ಜಮೀನು ಖರೀದಿಸುವ ಪಲಾನುಭವಿಗಳಿಗೆ 10 ಲಕ್ಷದವರೆವಿಗೂ ಸಹಾಯಧನ ನೀಡಲಾಗುವುದು. ಸ್ವಸಹಾಯ ಗುಂಪುಗಳಿಗೆ ಸಹಾಯಧನ ನೀಡುತ್ತಿದ್ದು, ಇದು ದುರುಪಯೋಗವಾಗುತ್ತಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ವೈಯಕ್ತಿಕವಾಗಿ ಸಂಘದ ಸದಸ್ಯರಿಗೆ ಸಹಾಯಧನ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ನಿಗಮದ ಅಧಿಕಾರಿ ಸಭೆಗೆ ತಿಳಿಸಿದರು.
ಅಕ್ಷರ ದಾಸೋಹ ಯೋಜನೆಯಡಿ ಮಕ್ಕಳಿಗೆ ಬಿಸಿಯೂಟ ತಯಾರಿಸಲು ಕಳೆದ ತಿಂಗಳು 550 ಕ್ವಿಂಟಾಲ್ ಅಕ್ಕಿ,11 ಕ್ವಿಂಟಾಲ್ ಬೇಳೆ ಜು.14 ರ ನಂತರ ಸರಬರಾಜಾಗಿದೆ. ಇದರಿಂದ ಶಾಲಾ ಮಕ್ಕಳ ಬಿಸಿಯೂಟ ತಯಾರಿಕೆಗೆ ವಿಳಂಬವಾಗಿದ್ದು, ಮುಂದಿನ ದಿನಗಳಲ್ಲಿ ಆಗಾಗದಂತೆ ಎಚ್ಚರ ವಹಿಸಲು ಅಧ್ಯಕ್ಷೆ ಅನುಸೂಯಮ್ಮ ಅಧಿಕಾರಿಗೆ ತಾಕೀತು ಮಾಡಿದರು. ಅಡುಗೆ ಸಿಬ್ಬಂದಿಗಳಿಗೆ ವೇತನ 5 ಲಕ್ಷ ಮಂಜೂರಾಗಿದ್ದು, 11 ಲಕ್ಷ ರು. ಅಗತ್ಯವಿದೆ. ಅನುದಾನ ಬಿಡುಗಡೆಯಾಗಬೇಕಿದೆ. ವೇತನ ಸಹ ಕಡಿಮೆಯಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದು ಸಭೆಯಲ್ಲಿ ಚರ್ಚಿಸಲಾಯಿತು.
ಮಾಡಬಾಳ್ ಹೋಬಳಿಯ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ರಾಗಿ ಖರೀದಿಸಿ ರೈತರು ಬಿತ್ತನೆ ಮಾಡಿದ್ದರೂ, ಆದರೆ ಬಿತ್ತನೆ ಬೀಜ ಕಳಪೆಯಿಂದ ಕೂಡಿದ್ದರಿಂದ ಮೊಳಕೆಯೊಡೆದಿಲ್ಲ ಎಂಬ ದೂರುಗಳು ಬಂದಿವೆ ಎಂದು ಸಾಮಾಜಿಕ ನ್ಯಾಯ ಸಮಿತಿ ಮಾಜಿ ಅಧ್ಯಕ್ಷ ಎಸ್. ಕಾಂತರಾಜು ಪ್ರಶ್ನಿಸಿದರು. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಅಗತ್ಯ ಕ್ರಮ ವಹಿಸಲು ಮೇಲಾಧಿಕಾರಿಗಳಿಗೆ ಪತ್ರ ಬರೆಯುವಂತೆ ಅಧಿಕಾರಿಗಳಿಗೆ ಅಧ್ಯಕ್ಷರು ಸೂಚಿಸಿದರು.
ಭರ್ತಿಗೆ ಕ್ರಮ: ಅಂಗನವಾಡಿ ಕೇಂದ್ರಗಳಲ್ಲಿ 9 ಹುದ್ದೆ ಖಾಲಿಯಿದ್ದು, ಭರ್ತಿಗೆ ಅಗತ್ಯ ಕ್ರಮ ವಹಿಸಬೇಕಿದೆ. 75 ಮಂದಿ ಭಾಗ್ಯ ಲಕ್ಷ್ಮೀ ಯೋಜನೆಗೆ ಅರ್ಜಿ ಸ್ವಿಕರಿಸಲಾಗಿದೆ. 99 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡವಿಲ್ಲ, 43 ಕೇಂದ್ರಗಳ ಕಟ್ಟಡ ನಿರ್ಮಾಣ ಪ್ರಗತಿಯಲ್ಲಿದೆ ಎಂದು ಸಿಡಿಪಿಓ ಇಲಾಖೆ ಮಾಲಾ ಸಭೆಯಲ್ಲಿ ವಿವರಿಸಿದರು.
ಅರಣ್ಯ, ಶಿಕ್ಷಣ, ಆರೋಗ್ಯ, ತೋಟಗಾರಿಕೆ,ಜಲಾನಯನ, ರೇಷ್ಮೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ತಾ.ಪಂ. ಸದಸ್ಯರಾದ ಪೊಲೀಸ್ ರಾಮಣ್ಣ, ತಾ.ಪಂ. ಇಓ ರಂಗೇಗೌಡ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

