ಪತ್ರಕರ್ತರು ಸೇತುವೆಯಂತೆ ಕೆಲಸ ಮಾಡಲು ಸಲಹೆ
ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ದೇವನಹಳ್ಳಿ ತಾಲೂಕು ಪತ್ರಕರ್ತರ ಸಂಘ ಸಂಯುಕ್ತ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಜಿಲ್ಲಾ ಪತ್ರಕರ್ತರ ಸಮಾವೇಶವನ್ನು ಇಲ್ಲಿನ ಗುರುಭವನದಲ್ಲಿ ಜಿಲ್ಲಾ ಸಂಘದ ಅಧ್ಯಕ್ಷ ಎಂ. ದೇವರಾಜ್ ಅಧ್ಯಕ್ಷತೆಯಲ್ಲಿ ಮಂಗಳವಾರ ಆಯೋಜಿಸಲಾಗಿತ್ತು. ಸಮಾರಂಭದ ಉದ್ಘಾಟನೆಯನ್ನು ಶಾಸಕ ಪಿಳ್ಳಮುನಿಶಾಮಪ್ಪ ನೆರವೇರಿಸಿ ಪತ್ರಕರ್ತರಾದವರು ಸಮಾಜ ಮತ್ತು ಸರ್ಕಾರದ ನಡುವೆ ಕೊಂಡಿಯಂತೆ ಕೆಲಸಮಾಡಬೇಕು. ತಾಲೂಕಿನ ಪತ್ರಕರ್ತರು ಭಿನ್ನಾಭಿಪ್ರಾಯ ಬಿಟ್ಟು ಸಂಘಟಿತರಾದರೆ ಮಾತ್ರ ಪತ್ರಿಕಾಭವನ ನಿರ್ಮಾಣ ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ ಕರ್ನಾಟಕದಲ್ಲಿ ಪತ್ರಿಕಾ ರಂಗ ಬೆಳೆದು ಬಂದ ದಾರಿ ಮತ್ತು ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಪತ್ರಿಕೆಗಳು ಹೇಗೆ ಕಾರ್ಯ ನಿರ್ವಹಿಸುತ್ತಿವೆ ಎಂಬುದರ ಬಗ್ಗೆ ತಿಳಿಸಿದರು. ಸಮಾರಂಭದಲ್ಲಿ ಹೊಸಕೋಟೆ ಪತ್ರಿಕೆ ಸಂಪಾದಕ ಮಂಜುನಾಥ್ ಮಾತನಾಡಿದರು. ಇದೇ ಸಂಧರ್ಭದಲ್ಲಿ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು, ಪುರಸಭಾ ಮುಖ್ಯಾಧಿಕಾರಿ ಎ.ಎಚ್. ನಾಗರಾಜ್ ಮಾತನಾಡಿದರು. ತಾಲೂಕು ಅಧ್ಯಕ್ಷ ವೈ. ರಾಮಕೃಷ್ಣಪ್ಪ, ರಾಜ್ಯ ಸಂಘದ ಸದಸ್ಯ ಎಂ.ಎನ್. ಮುನೇಗೌಡ, ಜಿಲ್ಲಾ ಸಂಘದ ಉಪಾಧ್ಯಕ್ಷ ಜೆ. ಮುನಿವೀರಣ್ಣ, ವಿ.ಆರ್. ಮುದ್ದಣ್ಣ, ಡಿ.ಕೆ.ಮಹೇಂದ್ರಕುಮಾರ್, ಟಿಡಿಎನ್ ಮೂರ್ತಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಬಿಜ್ಜವಾರ ಸುಬ್ರಹ್ಮಣ್ಯ ಸ್ವಾಗತ ಕೋರಿದರು. ಮುನಿಕೃಷ್ಣಪ್ಪ ಸಂಪಾದಕತ್ವದ ವಾಯ್ಸ್ ಆಫ್ ರಾಜಕೀಯ ಪಾಕ್ಷಿಕ ಪತ್ರಿಕೆಯನ್ನು ರಾಜ್ಯ ಸಂಘದ ಉಪಾಧ್ಯಕ್ಷ ಶಿವಾನಂದ ತಗಡೂರು ಬಿಡುಗಡೆ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

