ರಾಮನಗರ: ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಅವರನ್ನು ಅಧಿಕಾರದಿಂದ ವಂಚಿತರನ್ನಾಗಿಸಿರುವುದು ಕಾಂಗ್ರೆಸ್ ಪಕ್ಷದ ದಲಿತ ವಿರೋಧಿ ಧೋರಣೆಗೆ ಸಾಕ್ಷಿಯಾಗಿದೆ ಸಮತಾ ಸೈನಿಕ ದಳ ಸಂಘಟನೆ ಜಿಲ್ಲಾಧ್ಯಕ್ಷ ಗೋವಿಂದಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ 63ನೇ ಹುಟ್ಟುಹಬ್ಬದ ಪ್ರಯಕ್ತ ದಲಿತಪರ ಸಂಘಟನೆಗಳ ಒಕ್ಕೂಟದಿಂದ ನಗರದ ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಮೇಶ್ವರ ಅವರಿಗೆ ಇನ್ನಾದರೂ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿದರು. ಶೋಷಣೆಗೊಳಗಾದವರು, ದೀನದಲಿತರಿಗೆ ಅಧಿಕಾರ ನೀಡುವುದು ಸಂವಿಧಾನದ ಆಶಯವಾಗಿದ್ದು, ಕಾಂಗ್ರೆಸ್ನ ತತ್ವ ಸಿದ್ಧಾಂತವೂ ಕೂಡ ಇದೇ ಆಗಿದೆ. ಆದರೆ, ಪರಮೇಶ್ವರ ಅವರಿಗೆ ಸಚಿವ ಸ್ಥಾನ ನೀಡಲು ಮೀನ ಮೇಷ ಎಣಿಸುತ್ತಿರುವುದು ದಲಿತ ಜನಾಂಗದ ಆಕ್ರೋಶಕ್ಕೆ ಕಾರಣವಾಗಿದೆ ಎಂದರು. ಶಿಕ್ಷಣ ತಜ್ಞರು, ಕ್ರಿಯಾಶೀಲರು, ದೀನದಲಿತರ ಪ್ರಶ್ನಾತೀತ ನಾಯಕರಾದ ಜಿ.ಪರಮೇಶ್ವರ ಅವರಿಗೆ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ. ಆದರೆ, ಕಾರಣಾಂತರದಿಂದ ಆ ಸ್ಥಾನಕ್ಕೇರಲು ಸಾಧ್ಯವಾಗಲಿಲ್ಲ ಎಂದರು.
Advertisement