ನೆಲಮಂಗಲ: ಮಕ್ಕಳು ಸಾಮಾಜಿಕ ಮೌಲ್ಯವುಳ್ಳ ಸಂಸ್ಕಾರಯುತ ಶಿಕ್ಷಣ ಕಲಿಯುವುದು ಅವಶ್ಯಕವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗುರುರಾಜು ತಿಳಿಸಿದರು.
ಅವರು ಬುಧವಾರ ತಾಲೂಕಿನ ಹೊನ್ನೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸುಂದರ ವಿದ್ಯಾಗಣಪತಿಯ ದೇವಾಲಯ
ಉದ್ಘಾಟನಾ ಸಭೆಯಲ್ಲಿ ಮಾತನಾಡಿದರು. ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಿ.ಎನ್. ಪರಮೇಶ್ ಮಾತನಾಡುತ್ತಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿಯೇ ಉತ್ತಮ ಮಾದರಿ ಶಾಲೆಯನ್ನಾಗಿಸಲು ಶಾಲೆಯ ಶಿಕ್ಷಕರು ಹೆಚ್ಚಿನ ಶ್ರಮ ಪಟ್ಟಿದ್ದಾರೆ ಎಂದರು.
ಸಂದರ್ಭದಲ್ಲಿ ಗ್ರಾಮಸ್ಥರು ಮತ್ತು ಗ್ರಾಮ ಪಂಚಾಯ್ತಿ ವತಿಯಿಂದ ಹೊನ್ನೇನಹಳ್ಳಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೆಚ್ಚು ಮಕ್ಕಳಿದ್ದು, ಕಾಡು ಪ್ರದೇಶದಿಂದ ಇಲ್ಲಿಗೆ ಬರುವ ಮಕ್ಕಳು ಪ್ರತಿ ದಿನ ಕಾಡು ಪ್ರಾಣಿಗಳ ಭಯದಿಂದಲೇ ಶಾಲೆಗೆ ಬರುತ್ತಿದ್ದಾರೆ. ಆದ್ದರಿಂದ ಸರ್ಕಾರಿ ಪ್ರೌಢಶಾಲೆಯನ್ನು ಮಂಜೂರು ಮಾಡಿಕೊಡಬೇಕೆಂದು ಜಿಲ್ಲಾ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದರು. ಸಿದ್ಧಗಂಗಾ ಮಠದ ಸಿದ್ದಲಿಂಗಸ್ವಾಮೀಜಿ ಹಾಜರಿದ್ದರು. ಚಿಕ್ಕಮಸ್ಕಲ್ ಮಠದ ಬಸವಲಿಂಗ ಸ್ವಾಮೀಜಿ, ಹೊನ್ನಮ್ಮ ಗವಿ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದರು. ಗ್ರಾಮ ಪಂಚಾಯ್ತಿ ಅಧ್ಯಕ್ಷ ಪರಮೇಶ್ವರಯ್ಯ ಇತರರು ಇದ್ದರು.
Advertisement