ಬೆಂಗಳೂರು ಗ್ರಾಮಾಂತರ

ಅಖಂಡ ಭಜನಾ ಶಾಂತಿ ಸಪ್ತಾಹಕ್ಕೆ ಸಂಭ್ರಮದ ತೆರೆ

Published On :

ದೊಡ್ಡಬಳ್ಳಾಪುರ: ಇಲ್ಲಿನ ದೇವಾಂಗ ಮಂಡಲಿ ನೇತೃತ್ವದಲ್ಲಿ ಶ್ರೀರಾಮಲಿಂಗಚಂದ್ರ ಚೌಡೇಶ್ವರಿ ದೇವಾಲಯದಲ್ಲಿ 7 ದಿನಗಳ ಕಾಲ ನಿರಂತರವಾಗಿ ನಡೆದ ಅಖಂಡ ಭಜನಾ ಶಾಂತಿ ಸಪ್ತಾಹಕ್ಕೆ ಗುರುವಾರ ಬೆಳಗ್ಗೆ ತೆರೆಬಿತ್ತು.  12 ವಿವಿಧ ಭಜನಾ ತಂಡಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು.
ವೇಷಭೂಷಣ: ಬುಧವಾರ ರಾತ್ರಿ 8 ಗಂಟೆಯಿಂದ 10 ಗಂಟೆ ವರೆಗೆ ನಡೆದ ಭಜನಾ ಕಾರ್ಯಕ್ರಮದಲ್ಲಿ ವಿಶೇಷ ವೇಷಭೂಷಣಗಳನ್ನು ಧರಿಸಿ ಭಜನೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ವೇಷಭೂಷಣ ನೋಡಲೆಂದೇ ನೂರಾರು ಜನ ಸೇರಿದ್ದರು.  ಸಪ್ತಾಹದ ಕೊನೆಯ ದಿನದ ಅಂಗವಾಗಿ ಗುರುವಾರ ಶ್ರೀಮಾತೆಯ ರಾಜಬೀದಿ ಉತ್ಸವ ನಡೆಯಿತು. ದೇವಾಂಗ ಮಂಡಲಿ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.