ಬೆಂಗಳೂರು ಗ್ರಾಮಾಂತರ

ಪ್ರತಿಯೊಬ್ಬರೂಅಕ್ಷರಸ್ಥರಾಗಬೇಕು

Published On :

ಕೆ.ಆರ್. ಪೇಟೆ: ಒಂದು ದೇಶದ ಅಭಿವೃದ್ಧಿಯನ್ನು ಆ ದೇಶದಲ್ಲಿರುವ ಸಾಕ್ಷರತೆಯ ಪ್ರಮಾಣದಿಂದ ಅಳೆಯಲಾಗುತ್ತದೆ. ಆದ್ದರಿಂದ ದೇಶದ ಪ್ರತಿಯೊಬ್ಬರು ಅಕ್ಷರಸ್ಥರಾಗಬೇಕು ಎಂದು ಗ್ರಾಪಂ ಸದಸ್ಯ ಎ.ಬಿ. ಕುಮಾರ್ ಹೇಳಿದರು. ತಾಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮದ ಲೋಕ ಶಿಕ್ಷಣ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಕಲಿಕಾ ಕೇಂದ್ರಗಳ ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟಿಸಿದ ಅವರು, ಅನಕ್ಷರಸ್ಥರಿಗೆ ಅಕ್ಷರ ಜ್ಞಾನ ತುಂಬುವ ಶ್ರೇಷ್ಠ ಕಾರ್ಯ ಮಾಡುತ್ತಿರುವ ಸಾಕ್ಷರತಾ ಸ್ವಯಂ ಸೇವಕರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು. ಓದುವ ವಯಸ್ಸಿನಲ್ಲಿ ಕಾರಣಾಂತರಗಳಿಂದ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗದ 14 ರಿಂದ 35ವರ್ಷದೊಳಗಿನ ಪ್ರತಿಯೊಬ್ಬರಿಗೂ ಲೋಕ ಶಿಕ್ಷಣ ಕೇಂದ್ರಗಳಲ್ಲಿ ಕಲಿಯುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಕೇಂದ್ರದಲ್ಲಿ ಕಲಿಯುವವರ ಬಿಡುವಿನ ವೇಳೆಯಲ್ಲಿಯೇ ಸ್ವಯಂ ಸೇವಕರು ಅಥವಾ ಪ್ರೇರಕರು ಅಕ್ಷರ ಕಲಿಸುವ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು. ವಿದ್ಯಾವಂತರು ತಮ್ಮ ನೆರೆಹೊರೆಯಲ್ಲಿರುವ ಅನಕ್ಷರಸ್ಥರಿಗೆ ಅಕ್ಷರ ಕಲಿಸುವ ಕೆಲಸ ಮಾಡಬೇಕು ಎಂದರು.  ಗ್ರಾಪಂ ಅಧ್ಯಕ್ಷೆ ಪ್ರೇಮಮ್ಮ ಮಾಯಣ್ಣಗೌಡ ಅಧ್ಯಕ್ಷತೆ ವಹಿಸಿದ್ದರು. ಪಿಡಿಒ ದೇವೇಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.