ಸರ್ವೋದಯ ಚಿಂತನೆ ಪ್ರಗತಿಗೆ ಪೂರಕ
ದೊಡ್ಡಬಳ್ಳಾಪುರ: ದೇಶದ ಸರ್ವತೋಮುಖ ಪ್ರಗತಿಗೆ ಮಹಾತ್ಮ ಗಾಂಧೀಜಿ ಕಂಡ ಸರ್ವೋದಯ ಚಿಂತನೆಗಳ ಅನುಷ್ಠಾನ ಮುಖ್ಯ ಎಂದು ಕೊಂಗಾಡಿಯಪ್ಪ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಎಂ.ಜಿ. ಚಂದ್ರಶೇಖರಯ್ಯ ಹೇಳಿದರು.
ಇಲ್ಲಿನ ಕೊಂಗಾಡಿಯಪ್ಪ ವಿದ್ಯಾಸಂಸ್ಥೆಯಲ್ಲಿ ನಡೆದ ಸರ್ವೋದಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಭಾರತದ ಆರ್ಥಿಕ, ಸಾಮಾಜಿಕ, ಧಾರ್ಮಿಕವಾಗಿ ನೆಮ್ಮದಿ ಮತ್ತು ಸ್ವಾವಲಂಬನೆ ಆಗಬೇಕೆಂಬ ಚಿಂತನೆಯೇ ಸರ್ವೋದಯದ ಪರಿಕಲ್ಪನೆ. ಮನುಷ್ಯ ಕಲ್ಪಿತ ತಾರತಮ್ಯಗಳನ್ನು ನಿವಾರಣೆ ಮಾಡುವುದು ಅದರ ಆಶಯ ಎಂದರು.
ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೇಜರ್ ಮಹಾಬಲೇಶ್ವರ್ ಸರ್ವೋದಯ ದಿನದ ಪ್ರತಿಜ್ಞಾವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ಕಾಲೇಜಿನ ಎನ್ಸಿಸಿ, ಎನ್ಎಸ್ಎಸ್ ಮತ್ತು ವಿದ್ಯಾರ್ಥಿಗಳು ನೇತ್ರದಾನದ ವಾಗ್ದಾನವನ್ನು ಪಡೆದುಕೊಂಡರು.
ಪದವಿ ಕಾಲೇಜು ಪ್ರಾಂಶುಪಾಲ ಪ್ರೊ.ಬಿ.ಟಿ.ಮಹದೇವ್, ನೇತ್ರತಜ್ಞೆ ಡಾ.ಸುಷ್ಮಾ, ಕಾಲೇಜಿನ ಬೋಧಕರು, ವಿದ್ಯಾರ್ಥಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

