ನಿರಂತರ ಮೌಲ್ಯಮಾಪನ ಸ್ಥಗಿತಗೊಳಿಸಿ: ಪುಟ್ಟಣ್ಣ
ನೆಲಮಂಗಲ: ನಿರಂತರ ಮೌಲ್ಯಮಾಪನ ಶಿಕ್ಷಣ ಪದ್ಧತಿಯನ್ನು ಸರ್ಕಾರ ಕೂಡಲೆ ಸ್ಥಗಿತಗೊಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಹೇಳಿದರು.
ಅವರು ಭಾನುವಾರ ತಾಲೂಕಿನ ಟಿ.ಬೇಗೂರಿನಲ್ಲಿ ತಾಲೂಕು ಶಿಕ್ಷಕರ ಹಾಗೂ ಪ್ರಾಂಶುಪಾಲರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಶಿಕ್ಷಣ ವ್ಯವಸ್ಥೆಯಲ್ಲಿನ ಸಮಸ್ಯೆಗಳು ಹಾಗೂ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಾ ಅವೈಜ್ಞಾನಿಕ ಶಿಕ್ಷಣ ವ್ಯವಸ್ಥೆಯಿಂದಾಗಿ ರಾಜ್ಯದ ಸರ್ಕಾರಿ ಶಾಲೆಗಳ ಗುಣಮಟ್ಟ ಕುಂಠಿತವಾಗುತ್ತಿದೆ.
ಮಕ್ಕಳ ಶಿಕ್ಷಣದಲ್ಲಿ ಕೆಟ್ಟ ಪರಿಣಾಮ ಬೀರಿದೆ. ಶಿಕ್ಷಕರು ಪಾಠೋಪಚಾರಕ್ಕಿಂತ ಸರ್ಕಾರದ ಸೌಲಭ್ಯಗಳಾದ ಕ್ಷೀರಭಾಗ್ಯ, ಬಿಸಿಯೂಟ, ಹಾಗೂ ಶೌಚಾಲಯಗಳನ್ನು ಸ್ವಚ್ಛವಾಗಿಡುವಂತಹ ಕಾರ್ಯಗಳಲ್ಲಿ ಶಾಲಾ ಅವಧಿ ಮುಗಿಯುತ್ತಿರುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಶಿಕ್ಷಕರು ಒತ್ತು ನೀಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಶಿಕ್ಷಕರಿಗೆ ಮಕ್ಕಳಿಗೆ ಕಲಿಸುವ ಕೆಲಸದ ಹೊರತು ಬೇರೆ ಕಾರ್ಯಗಳಿಗೆ ನಿಯೋಜಿಸಬಾರದು ಎಂದರು.
ಸರ್ಕಾರಿ ಶಾಲೆಗಳ ಅಭಿವೃದ್ಧಿ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಬೇಕು. ಶಿಕ್ಷಕರ ಬಾಕಿ ವೇತನ ನೀಡಬೇಕು. ಶಿಕ್ಷಕರ ನಿವೃತ್ತಿ ವೇತನಕ್ಕೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ತಿಳಿಸಿದರು. ಮುಂದಿನ ಎರಡು ತಿಂಗಳಲ್ಲಿ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗುವ ವಿಧಾನ ಪರಿಷತ್ ಚುನಾವಣೆಯಲ್ಲಿ ನಾನು ಸ್ಪರ್ದಿಸುತ್ತಿದ್ದು, ನನ್ನ ಕೆಲಸ ಈವರೆಗೂ ಮೆಚ್ಚುಗೆಯಾಗಿದ್ದರೆ ನನ್ನ ಬೆಂಬಲಿಸಿ ಎಂದು ಮನವಿ ಮಾಡಿದರು.
ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ಜಿಲ್ಲಾಧ್ಯಕ್ಷ ನಟರಾಜ್, ಪ್ರಾಥಮಿಕ ಶಾಲಾ ಸಂಘದ ಅಧ್ಯಕ್ಷ ಜಿ.ವಿ. ಕುಮಾರ್, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಎಂ.ವಿ. ನೆಗಳೂರ್, ಮುರುಳಿ ಕಾಲೇಜಿನ ಪ್ರಾಂಶುಪಾಲ ಪ್ರಕಾಶ್, ಮುಖಂಡ ನರಸೇಗೌಡ ಸೇರಿದಂತೆ ನೂರಾರು ಜನ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

