ಬೆಂಗಳೂರು ಗ್ರಾಮಾಂತರ

ಕಾರ್ಮಿಕರ ವಜಾ ಖಂಡಿಸಿ ಪ್ರತಿಭಟನೆ

Published On :

ಕ.ಪ್ರ.ವಾರ್ತೆ    ರಾಮನಗರ    ಫೆ.3
ತಾಲೂಕಿನ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾನ್ಸನ್ ಕಂಟ್ರೋಲ್ ಕಾರ್ಖಾನೆಯಿಂದ ಕಾರ್ಮಿಕರ ವಜಾ ಖಂಡಿಸಿ ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸುತ್ತಿದ್ದ ಕರ್ನಾಟಕ ರಕ್ಷಣಾ ವೇದಿಕೆಯ 50ಕ್ಕೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು.
ಕಾರ್ಖಾನೆ ಎದುರು 2 ತಾಸಿಗೂ ಹೆಚ್ಚು ಸಮಯ ಧರಣಿ ನಡೆಸಿದ ಪ್ರತಿಭಟನಾಕಾರರು ಕಾರ್ಖಾನೆಗೆ ಮುತ್ತಿಗೆ ಹಾಕಲು ಮುಂದಾದರು. ಆ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಅಡ್ಡಗಟ್ಟಿದರು. ನಂತರ ಪ್ರತಿಭಟನಾನಿರತರನ್ನು ಬಂಧಿಸಿ, ಅವರ ವಿರುದ್ಧ ಪ್ರಕರಣ ದಾಖಲಿಸಿ, ಬಿಡುಗಡೆ ಮಾಡಲಾಯಿತು.  
88 ನೌಕರರ ವಜಾ: ಜಾನ್ಸನ್ ಕಂಟ್ರೋಲ್ ಕಂಪನಿಯಲ್ಲಿ 88 ಕಾರ್ಮಿಕರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಅವರೆಲ್ಲರನ್ನೂ ಪುನಃ ಕೆಲಸಕ್ಕೆ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ವಜಾಗೊಂಡಿರುವ ನೌಕರರು 2 ವರ್ಷದಿಂದ ಪಾಳಿ ವ್ಯವಸ್ಥೆಯಲ್ಲಿ ಕೆಲಸ ನಿರ್ವಹಿಸಿ, ಸಂಸ್ಥೆಗೆ ದುಡಿದಿದ್ದಾರೆ. ಈ ಕಾರ್ಮಿಕರಿಗೆ ಯಾವುದೇ ಸವಲತ್ತುಗಳನ್ನೂ ನೀಡದೆ, ಕಾರ್ಮಿಕ ವಿರೋಧಿ ಧೋರಣೆ ತಳೆದು ಇದೀಗ ಬೀದಿಗೆ ಅಟ್ಟಲಾಗಿದೆ ಎಂದು ಅವರು ಆಡಳಿತ ಮಂಡಳಿ ವಿರುದ್ಧ ಕಿಡಿ ಕಾರಿದರು.


ಸ್ಥಳೀಯರಿಗೆ ಉದ್ಯೋಗ
ಸ್ಥಳೀಯರಿಗೆ ಶೇಕಡ 80ರಷ್ಟು ಉದ್ಯೋಗ ನೀಡಬೇಕೆಂದು ಸರೋಜಿನಿ ಮಹಿಷಿ ವರದಿಯಲ್ಲಿದೆ. ಆದರೆ, ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳು ನಿಯಮ ಪಾಲಿಸುತ್ತಿಲ್ಲ. ಈ ಕುರಿತು ಸರ್ಕಾರ ಗಮನ ಹರಿಸದ ಪರಿಣಾಮ ಅರ್ಹತೆ ಇರುವ ಅದೆಷ್ಟೋ ಸ್ಥಳೀಯರು ಉದ್ಯೋಗ ವಂಚಿತರಾಗಿದ್ದಾರೆ ಎಂದು ಕರವೇ ಆರೋಪಿಸಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.