ಬೆಂಗಳೂರು ಗ್ರಾಮಾಂತರ

ವಿದ್ಯಾರ್ಥಿನಿಯರಿಗೆ ಸಹಾಯಧನ ವಿತರಣೆ

Published On :

ದೊಡ್ಡಬಳ್ಳಾಪುರ: ಬಡತನದ ಕಾರಣಕ್ಕಾಗಿ ಶಿಕ್ಷಣದಿಂದ ವಂಚಿತರಾಗುತ್ತಿರುವ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ದಾನಿಗಳು ನೀಡುವ ನೆರವು ಭವಿಷ್ಯವನ್ನು ರೂಪಿಸಬಲ್ಲದು ಎಂದು ಜಿಪಂ ಮಾಜಿ ಅಧ್ಯಕ್ಷ ಸಿ.ಡಿ.ಸತ್ಯನಾರಾಯಣಗೌಡ ಹೇಳಿದರು.
ತಾಲೂಕಿನ ಕನಸವಾಡಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಗ್ರೂಪ್ಸ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಸಹಾಯಧನದ ಚೆಕ್ ವಿತರಿಸಿ ಮಾತನಾಡಿದರು.
ಮಾಜಿ ಜಿಪಂ ಸದಸ್ಯ ಆರ್.ದಯಾನಂದಸ್ವಾಮಿ ಮಾತನಾಡಿ, ಈ ಬಗೆಯ ನೆರವು ಮತ್ತು ಸಹಾಯ ಯೋಜನೆಯನ್ನು ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು. ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉನ್ನತ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ವೈಯಕ್ತಿಕ ಧನಸಹಾಯ ಬಹುಮಾನ ನೀಡುವುದಾಗಿ ಘೋಷಿಸಿದರು. ಮಲಬಾರ್ ಗ್ರೂಪ್ಸ್ನ ಮುಸ್ತಾಫಾ ಮಾತನಾಡಿದರು.
ಪ್ರಾಂಶುಪಾಲ ರಾಜಶೇಖರಯ್ಯ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮಲಬಾರ್ ಗ್ರೂಪ್ಸ್ನ ಜುಬೇರ್, ಸನ್ನಿ, ಸ್ಥಳೀಯ ಮುಖಂಡ ರಾಮಲಿಂಗಯ್ಯ, ಪ್ರಕಾಶ್, ಸದಾಶಿವಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.