ಜನಪರ ಯೋಜನೆ ಸದ್ಬಳಕೆಯಾಗಲಿ
ರಾಮನಗರ: ಸರ್ಕಾರದ ಜನಪರ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಗ್ರಾಮೀಣಾಭಿವೃದ್ದಿಗೆ ಮುಂದಾಗುವಂತೆ ತಾಪಂ ಇಒ ಟಿ.ಎಚ್.ವೆಂಕಟೇಶ್ ಸಾರ್ವಜನಿಕರಿಗೆ ಕಿವಿಮಾತು ಹೇಳಿದರು.
ಕ್ಷೇತ್ರ ಪ್ರಸಾರ ನಿರ್ದೇಶನಾಲಯ ಮೈಸೂರು ಘಟಕ ಹಾಗೂ ರಾಮನಗರ ತಾಪಂ ವತಿಯಿಂದ ತಾಲೂಕಿನ ಶ್ಯಾನುಭೋಗನಹಳ್ಳಿ ಗ್ರಾಪಂ ವ್ಯಾಪ್ತಿಯ ವಡ್ಡರದೊಡ್ಡಿ ಗ್ರಾಮದಲ್ಲಿ ನಡೆದ 'ನಿರ್ಮಲ ಭಾರತ ಅಭಿಯಾನ' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರ್ಕಾರವು ಗ್ರಾಮೀಣಾಭಿವೃದ್ಧಿಗೆ ಹಲವು ಮಹತ್ತರ ಯೋಜನೆಗಳನ್ನು ಜಾರಿಗೊಳಿಸಿದೆ. ಅವನ್ನು ಸದ್ಬಳಕೆ ಮಾಡಿಕೊಳ್ಳದಿದ್ದಲ್ಲಿ ಯೋಜನೆ ವಿಫಲವಾಗುತ್ತದೆ. ಅಂತೆಯೇ ಗ್ರಾಮಾಭಿವೃದ್ಧಿಯೂ ಕುಂಠಿತಗೊಳ್ಳಲಿದೆ ಎಂದರು.
ಪೂರ್ಣಿಮಾ ಸಲಹೆ: ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ, ಯೋಜನೆಯ ಉದ್ದೇಶವನ್ನು ಸಾರ್ಥಕಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಕ್ಷೇತ್ರ ಪ್ರಸಾರ ನಿರ್ದೇಶಾನಲಯದ ಮೈಸೂರು ಘಟಕದ ಸಹಾಯಕ ನಿರ್ದೇಶಕಿ ಡಾ. ಟಿ.ಸಿ.ಪೂರ್ಣಿಮಾ ಸಲಹೆ ನೀಡಿದರು.
ದೇಶದ ಪ್ರತಿಯೊಬ್ಬ ವ್ಯಕ್ತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರುವ ಕೇಂದ್ರ ಸರ್ಕಾರವು ಈ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಿದೆ. ಅದರಡಿ ಶೌಚಾಲಯ ನಿರ್ಮಾಣ, ಸ್ವಚ್ಛಕಾ ಕಾರ್ಯಗಳಿಗೆ ಆದ್ಯತೆ ನೀಡುವುದು ಅಗತ್ಯ ಎಂದು ಅವರು ಹೇಳಿದರು.
ಶೌಚಾಲಯ, ಸ್ವಚ್ಛತೆ ಕುರಿತಾದ ಸಾಕ್ಷ್ಯ ಚಿತ್ರಗಳನ್ನು ಪ್ರದರ್ಶಿಸಲಾಯಿತು. ಇದೇ ವೇಳೆ ಗ್ರಾಮದ ಹಲವರು ಶೌಚಾಲಯ ನಿರ್ಮಾಣಕ್ಕೆ ಹೆಸರು ನೋಂದಾಯಿಸಿಕೊಂಡರು. ಗ್ರಾಪಂ ಅಧ್ಯಕ್ಷೆ ಶಶಿಕಲಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಕೇಶವ ಮೂರ್ತಿ, ದಿವ್ಯಾ, ಕ್ಷೇತ್ರ ಪ್ರಚಾರ ಸಹಾಯಕ ಮುರಳೀಧರ, ಜಿಲ್ಲಾ ಸಮಾಲೋಚಕ ವೆಂಕಟೇಶ್ ಭಾಗವಹಿಸಿದ್ದರು.
ಗೋಪಹಳ್ಳಿಯಲ್ಲೂ ಕಾರ್ಯಕ್ರಮ: ಕ್ಷೇತ್ರ ಪ್ರಸಾರ ನಿರ್ದೇಶನಾಲಯ ಮತ್ತು ತಾ.ಪಂ. ವತಿಯಿಂದ ಬಿಡದಿ ಹೋಬಳಿಯ ಗೋಪಳ್ಳಿಯಲ್ಲಿಯೂ ಶೌಚಾಲಯ ನಿರ್ಮಾಣ, ನಿರ್ಮಲ ಭಾರತ ಅಭಿಯಾನ ಕಾರ್ಯಕ್ರಮಗಳ ಮಾಹಿತಿಗಳನ್ನು ಈ ತಂಡ ಗ್ರಾಮೀಣ ಜನತೆಗೆ ನೀಡಿ, ಸಾಕ್ಷ್ಯಚಿತ್ರ ಪ್ರದರ್ಶಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

