ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ ಜಿಲ್ಲಾ ಕೇಂದ್ರ; ರೈತ ಸಂಘ ಬೆಂಬಲ

Published On :

ದೇವನಹಳ್ಳಿ: ದೇವನಹಳ್ಳಿ ಜಿಲ್ಲಾ ಕೇಂದ್ರವಾಗಲು ಎಲ್ಲ ರೀತಿಯ ಅರ್ಹತೆ ಪಡೆದಿದೆ ಎಂದು ಹೊಸಕೋಟೆ ತಾಲೂಕು ರೈತ ಸಂಘದ ಅಧ್ಯಕ್ಷ ಕೆಂಪೇಗೌಡ ಇಲ್ಲಿನ ಮಿನಿ ವಿಧಾನಸೌಧದ ಬಳಿ ನಡೆಯುತ್ತಿರುವ 16ನೇ  ದಿನದ ಪ್ರತಿಭಟನಾ ಧರಣಿಯ ಬಹಿರಂಗ ಸಭೆಯಲ್ಲಿ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೋರಾಟದ ಕಿಚ್ಚು ಹೆಚ್ಚಾಗಬೇಕಿತ್ತು ಆದರೆ ರೈತರಿಗೆ ತಮ್ಮದೇ ಆದ ಕೆಲಸಗಳು ಇದ್ದಕಾರಣ ಪ್ರತಿಭಟನಾ ಧರಣಿಗೆ ಬೆಂಬಲ ನೀಡಲು ಸಾಧ್ಯವಾಗಿಲ್ಲ, ನಮ್ಮ ಹೋರಾಟ ಯಶಸ್ವಿಯಾಗುವವರೆಗೂ ಹೋರಾಟ ಮುಂದುವರೆಸುತ್ತೇವೆ ಅಲ್ಲದೆ ರಾಜ್ಯ ರೈತ ಸಂಘದ ಮುಖಂಡರು ಸಹ ದೇವನಹಳ್ಳಿ ಜಿಲ್ಲಾ ಹೋರಾಟ ಸಮಿತಿಯ ಪರವಾಗಿದ್ದಾರೆ ಎಂದು ಕೆಂಪೇಗೌಡ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ರೈತ ಸಂಘದ ಅಧ್ಯಕ್ಷ ವೆಂಕಟನಾರಾಯಣಪ್ಪ ಮಾತನಾಡಿ, ದೊಡ್ಡಬಳ್ಳಾಪುರದ ಜನರು ನಮಗೆ ವಿರೋಧಿಗಳಲ್ಲ. ಆದರೆ ಈಗಾಗಲೇ ಉಪ ವಿಭಾಗ ಕಚೇರಿ ಸ್ಥಳಾಂತರಕ್ಕೆ ಸರ್ಕಾರ ಅನುಮತಿ ಕೊಟ್ಟಿದೆ ಅಲ್ಲದೆ ದೇವನಹಳ್ಳಿ ಮತ್ತು ಹೊಸಕೋಟೆ ತಾಲೂಕುಗಳಿಗೆ ಪ್ರತ್ಯೇಕ ಉಪ ವಿಭಾಗ ಕಚೇರಿಗೆ ಮುಖ್ಯಮಂತ್ರಿಗಳು ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿಯವರಿಗೆ ಪ್ರಸ್ತಾವನೆಗಾಗಿ ಆದೇಶ ನೀಡಿರುತ್ತಾರೆ. ಈ ನಿಟ್ಟಿನಲ್ಲಿ ದೇವನಹಳ್ಳಿ ಜಿಲ್ಲಾ ಕೇಂದ್ರದ ಬಗ್ಗೆ ಸರ್ಕಾರ ಎರಡು ದಿನದೊಳಗಾಗಿ ತೀರ್ಮಾನ ತೆಗೆದುಕೊಳ್ಳಬೇಕು ಇಲ್ಲದಿದ್ದರೆ ಕಾನೂನು ಭಂಗ ಚಳುವಳಿ ಮಾಡಲಾಗುವುದು ಎಂದರು.
ಹಾಸನದ ಹಿರಿಯ ರೈತ ಮುಖಂಡ ಹುಚ್ಚಪ್ಪ, ತಾಲೂಕು ಹಸಿರು ಸೇನೆ ಅಧ್ಯಕ್ಷ ಹರೀಶ್ ಹಾಗೂ ಸೂ.ರಂ.ರಾಮಯ್ಯ, ಜಿಲ್ಲಾ ಹೋರಾಟ ಸಮಿತಿ ಮುಖ್ಯ ಸಂಚಾಲಕ ಬಿ.ಕೆ.ಶಿವಪ್ಪ ಮತ್ತಿತರರು ಮಾತನಾಡಿ, ಜಿಲ್ಲಾ ಕೇಂದ್ರ ಹೋರಾಟಕ್ಕೆ ಹೊಸಕೋಟೆ ತಾಲೂಕಿನ ರೈತ ಸಂಘ ಬೆಂಬಲ ಸೂಚಿಸಿರುವುದಕ್ಕೆ ಅಭಿನಂದಿಸಿ, ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳುವವರೆಗೂ ಪ್ರತಿಭಟನಾ ಧರಣಿ ನಿಲ್ಲುವುದಿಲ್ಲ ಎಂದರು.
ಮೆರವಣಿಗೆ: ದೇವನಹಳ್ಳಿ, ಹೊಸಕೋಟೆ ಮತ್ತು ಮಾಗಡಿ ತಾಲೂಕಿನ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಪ್ರವಾಸಿ ಮಂದಿರದಿಂದ ಮಿನ ವಿಧಾನಸೌಧದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.  ತಾಲೂಕು ರೈತ ಸಂಘದ ಅಧ್ಯಕ್ಷ ಗಾರೆ ರವಿಕುಮಾರ್, ಮುಖಂಡರಾದ ಬಚ್ಚೇಗೌಡ, ಮಾಗಡಿ ಮುತ್ತಯ್ಯ, ಹೊಸಕೋಟೆ ರಾಜಣ್ಣ, ಮುನಿಶಾಮಪ್ಪ, ವೆಂಕಟೇಶ್, ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಆರ್.ರವಿಕುಮಾರ್, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ವೀರಭದ್ರಯ್ಯ ಹಾಗೂ ಸಾವುಕನಹಳ್ಳಿ ಗೋಪಾಲಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.