ಬೆಂಗಳೂರು ಗ್ರಾಮಾಂತರ

ವಿದ್ಯಾ ಸಹಾಯ ಹಸ್ತಕ್ಕೆ ಚಾಲನೆ

Published On :

ದೊಡ್ಡಬಳ್ಳಾಪುರ: ಇಲ್ಲಿನ ತಾಲೂಕು ಯುವ ಕಾಂಗ್ರೆಸ್ ಘಟಕದ ನೇತೃತ್ವದಲ್ಲಿ ಶಿಕ್ಷಣ ಹಕ್ಕು ಕಾಯ್ದೆ ಕುರಿತ ನಾಗರಿಕ ಜಾಗೃತಿ ಕಾರ್ಯಕ್ರಮ ವಿದ್ಯಾ ಸಹಾಯ ಹಸ್ತ ಸಪ್ತಾಹ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ಶಾಸಕ ಟಿ. ವೆಂಕಟರಮಣಯ್ಯ ಉದ್ಘಾಟಿಸಿದರು. ಅವರು ಮಾತನಾಡಿ, ಶಿಕ್ಷಣ ಹಕ್ಕು ಕಾಯ್ದೆಯಡಿ ಖಾಸಗಿ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕಾಗಿ ಮೀಸಲಿಡಲಾಗಿದೆ. ಪ್ರಸಕ್ತ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ಈಗಾಗಲೇ ಅರ್ಜಿಗಳನ್ನು ಆಹ್ವಾನಿಸಿ ಪ್ರಕ್ರಿಯೆ ಚಾಲನೆಗೊಂಡಿದೆ.  ಶಿಕ್ಷಣ ಹಕ್ಕು ಕಾಯ್ದೆ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಯೋಜನೆಗಳಲ್ಲಿ ಒಂದಾಗಿದೆ. ಈ ಬಗ್ಗೆ ಪೋಷಕರಲ್ಲಿ ಹಲವು ಬಗೆಯ ಗೊಂದಲಗಳಿವೆ. ಈ ನಿಟ್ಟಿನಲ್ಲಿ ಅವರ ಗೊಂದಲ ನಿವಾರಿಸಿ ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪೋಷಕರಿಗೆ ನೇರವಾಗುವಂತೆ ತಾವೇ ಅರ್ಜಿಗಳನ್ನು ಭರ್ತಿ ಮಾಡಿ ನೀಡುತ್ತಿರುವುದು ಉತ್ತಮ ಬೆಳವಣಿಗೆ ಎಂದರು.ತಾಲೂಕು ಕಾಂಗ್ರೆಸ್ ಮುಖಂಡರು ಮಾತನಾಡಿ ಇಂದಿನ ದಿನಗಳಲ್ಲಿ ಗ್ರಾಮಾಂತರದ ವಿದ್ಯಾರ್ಥಿಗಳು ಮತ್ತು ಬಡವಿದ್ಯಾರ್ಥಿಗಳಿಗೆ ಆಂಗ್ಲ ಭಾಷಾ ಮತ್ತು ಖಾಸಗಿ ಶಾಲೆ ಶಿಕ್ಷಣ ಮರಿಚಿಕೆಯಾಗಿದೆ. ಈ ಹಂತದಲ್ಲಿ ಸರ್ಕಾರ ಮಕ್ಕಳ ಶಿಕ್ಷಣ ಹಕ್ಕನ್ನು ವ್ಯವಸ್ಥಿತಗೊಳಿಸುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವದ್ದಾಗಿದೆ ಎಂದರು.
ಸುಮಾರು 200ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿ ಸಂಬಂಧಪಟ್ಟ ಶಾಲೆಗಳಿಗೆ ಸಲ್ಲಿಸಲು ಮಾರ್ಗದರ್ಶನ ಮಾಡಲಾಯಿತು.
ತಾಲೂಕು ಪಂಚಾಯಿತಿ ಅಧ್ಯಕ್ಷೆ ನರಸಮ್ಮ, ನಗರಸಭಾ ಸದಸ್ಯ ಕೆ.ಜಿ.ರಘುರಾಂ, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ಧಬೈರೇಗೌಡ, ಕಾರ್ಯದರ್ಶಿ ರಾಘವೇಂದ್ರ ಪ್ರಸಾದ್, ಜವಾಜಿ ರಾಜೇಶ್, ಇಮ್ರಾನ್ ಖಾನ್, ರಾಮಾಂಜಿನಪ್ಪ, ಲೋಕಸಭಾ ಕ್ಷೇತ್ರ ಯುವ ಕಾಂಗ್ರೆಸ್ ಕಾರ್ಯದರ್ಶಿ ರಮ್ಯ ಲಕ್ಷೀಪತಿ, ಕರೇನಹಳ್ಳಿ ಮಂಜುನಾಥ್, ಶಿವಾರೆಡ್ಡಿ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.