ಬೆಂಗಳೂರು ಗ್ರಾಮಾಂತರ

ಶೈಕ್ಷಣಿಕ ಪ್ರಗತಿಗೆ ಸರ್ಕಾರಿ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ಎನ್. ನಾಗರಾಜ್

Published On :

ಸೂಲಿಬೆಲೆ:ಗ್ರಾಮೀಣ ಭಾಗದಲ್ಲಿರುವ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಸರ್ಕಾರ ನೀಡುತ್ತಿರುವ ಸೌಲಭ್ಯಗಳನ್ನು  ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕ ಪ್ರಗತಿಯಲ್ಲಿ ಯಶಸ್ಸು ಕಾಣಬೇಕು. ವಿದ್ಯೆ ಕಲಿತಾಗ ಮಾತ್ರ ವ್ಯಕ್ತಿ ಬದಲಾವಣೆಯನ್ನು ಕಾಣಲು ಸಾಧ್ಯ ಎಂದು ಶಾಸಕ ಎನ್. ನಾಗರಾಜ್ ಹೇಳಿದರು.
ಸೂಲಿಬೆಲೆ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬುಧವಾರ ನಡೆದ ಕಾಲೇಜು ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರು ಶಿಕ್ಷಣವನ್ನು ಪಡೆದು ದೇಶದ ಅಭಿವೃದ್ಧಿಗೆ ಕಾರಣವಾಗಬೇಕು. ಮಕ್ಕಳ ಕಲಿಕೆ ಪ್ರಗತಿಗೆ ಬರೀ ಸರ್ಕಾರವನ್ನು ನಂಬಿಕೊಂಡರೆ ಸಾಲದು. ಇದರಲ್ಲಿ ಪೋಷಕರ ಜವಾಬ್ದಾರಿ ತುಂಬಾ ಇದೆ. ಸಭ್ಯ ನಾಗರಿಕ ಸಮಾಜವನ್ನು ಕಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯವಾಗಿದ್ದು, ಕಾಲೇಜಿನ ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯವಾಗಿರುವ ಎಲ್ಲ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸಿದ್ಧರಿದ್ದು, ಶಿಕ್ಷಕರು ಮತ್ತು ಮಕ್ಕಳಿಂದ ಉತ್ತಮ ಫಲಿತಾಂಶ ಹೊರಬರಬೇಕು. ಆಗ ಮಾತ್ರ ಸವಲತ್ತು ನೀಡಿದಕ್ಕೆ ಸಾರ್ಥಕತೆ ಸಿಗುತ್ತದೆ. ಕಾಲೇಜಿನಲ್ಲಿ ಕಳೆದ ಕೆಲ ದಿನಗಳಿಂದೆ ಕಂಪ್ಯೂಟರ್‌ಗಳು ಕಳವಾಗಿದ್ದು, ವಿದ್ಯಾರ್ಥಿಗಳ ಕಲಿಕೆ ದೃಷ್ಟಿಯಿಂದ ಸ್ವಂತತ್ರವಾಗಿ 5 ಕಂಪ್ಯೂಟರ್‌ಗಳನ್ನು ಕೊಡಿಸುವುದಾಗಿ ಶಾಸಕರು ಭರವಸೆ ನೀಡಿದರು. ಇದೇ ವೇಳೆ ಕಾಲೇಜಿಗೆ ಶಾಸಕರು ನೀಡಿದ ಡೆಸ್ಕುಗಳನ್ನು ವಿತರಣೆ ಮಾಡಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕಾಲೇಜು ಅಭಿವೃದ್ಧಿ ಸಮಿತಿ ಖಂಜಾಚಿ ವಿ.ಪ್ರಸಾದ್ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸೂ.ರಂ. ರಾಮಯ್ಯ ಅಧ್ಯಕ್ಷತೆ ವಹಿಸಿದ್ದರು.
ಪ್ರಾಂಶುಪಾಲರಾದ ಚಂದ್ರಶೇಖರ್, ಗ್ರಾಪಂ ಅಧ್ಯಕ್ಷ ನಾರಾಯಣಪ್ಪ, ಹಿರಿಯ ಉಪನ್ಯಾಸಕ ಹನುಮಂತರಾಯಪ್ಪ, ಸದಸ್ಯ ರಾಘವೇಂದ್ರ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.