ಜಾನಪದ ಲೋಕದಲ್ಲಿ ಬೆಂ. ವಿಭಾಗ ಮಟ್ಟದ ಯುವಜನ ಮೇಳ
ಕ.ಪ್ರ.ವಾರ್ತೆ ರಾಮನಗರ ಫೆ.6
2013-14ನೇ ಸಾಲಿನ ಬೆಂಗಳೂರು ವಿಭಾಗ ಮಟ್ಟದ ಯುವಜನ ಮೇಳವು ನಗರದ ಹೊರ ವಲಯದಲ್ಲಿರುವ ಜಾನಪದ ಲೋಕದಲ್ಲಿ ಫೆ.20 ರಿಂದ 22ರವರೆಗೆ ಮೂರು ದಿನಗಳ ಕಾಲ ಆಯೋಜಿಸುವುದಾಗಿ ಅಪರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯುವಜನ ಮೇಳ ಆಯೋಜನೆ ಸಂಬಂಧ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಯುವಜನ ಮೇಳವನ್ನು ಯಶಸ್ವಿಯಾಗಿ ಸಂಘಟಿಸಲು ವಿವಿಧ ಸಮಿತಿಗಳನ್ನು ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸುವುದಾಗಿ ಹೇಳಿದರು.
ಸ್ವಾಗತ ಸಮಿತಿ, ಹಣಕಾಸು ಸಮಿತಿ, ಆಹಾರ ಸಮಿತಿ, ವೇದಿಕೆ ಸಮಿತಿ, ನೋಂದಣಿ ಸಮಿತಿ, ಸಾರಿಗೆ ಸಮಿತಿ, ಆರೋಗ್ಯ ಸಮಿತಿ, ಶಿಸ್ತು ಸಮಿತಿ, ಪ್ರಚಾರ ಸಮಿತಿ ಹಾಗೂ ನಿರ್ಣಾಯಕ ಸಮಿತಿಗಳನ್ನು ರಚಿಸುತ್ತಿರುವುದಾಗಿ ಹೇಳಿದ ಅವರು ವಿಭಾಗದ ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ ಮತ್ತು ರಾಮನಗರ ಸೇರಿದಂತೆ 9 ಜಿಲ್ಲೆಗಳ ಕಲಾವಿದರು, ಅಧಿಕಾರಿಗಳು ಹಾಗೂ ವ್ಯವಸ್ಥಾಪಕರು ಭಾಗವಹಿಸುವರು ಎಂದು ತಿಳಿಸಿದರು.
ಪ್ರತಿ ಜಿಲ್ಲೆಯಿಂದ ಸುಮಾರು 125 ಕಲಾವಿದರು ಯುವಜನ ಮೇಳಕ್ಕೆ ಆಗಮಿಸಲಿದ್ದು, ಯುವಕರಿಗಾಗಿ 15 ವಿವಿಧ ಸ್ಪರ್ಧೆಗಳು ಹಾಗೂ ಯುವತಿಯರಿಗಾಗಿ 11 ಸ್ಪರ್ಧೆಗಳನ್ನು ನಡೆಸಲಾಗುವುದು. ಸುಮಾರು 935 ಯುವಕರು 385 ಯುವತಿಯರು ಒಟ್ಟಾರೆ 1320 ಸ್ಪರ್ಧಾಳುಗಳು ಭಾಗವಹಿಸುವರು. ಯಾವುದೇ ತೊಂದರೆಗಳು ಎದುರಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಎಲ್ಲ ಅಧಿಕಾರಿಗಳು ಸಹಕರಿಸುವಂತೆ ಎಂದು ಬಸವರಾಜು ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

