'ನೊಂದಿರುವ ಎಲ್ಲಾ ವರ್ಗದವರಿಗೆ ಸಹಾಯ ಹಸ್ತ'
ಚನ್ನಪಟ್ಟಣ : ಸಮಾಜದಲ್ಲಿ ನೊಂದಿರುವ ಎಲ್ಲಾ ವರ್ಗದವರಿಗೆ ಸಹಾಯ ಹಸ್ತ ಚಾಚುವ ಉದ್ದೇಶದಿಂದ ಅಹಿಂದ ನೌಕರರ ಸಂಘ ಸ್ಥಾಪಿಸಿರುವುದಾಗಿ ಸಂಘದ ಜಿಲ್ಲಾಧ್ಯಕ್ಷ ಹಮ್ಮಳ್ಳಿ ದೊಡ್ಡಿ ನಾಗೇಂದ್ರ ತಿಳಿಸಿದರು.
ಇಲ್ಲಿನ ಕಾಳಿದಾಸ ವಿದ್ಯಾಸಂಸ್ಥೆಯ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಇತ್ತೀಚಿನ ದಿನಗಳಲ್ಲಿ ಜಾತಿಹೆಸರಿನಲ್ಲಿ ಸಮಾಜವನ್ನು ಒಡೆಯುವ ಕಾರ್ಯ ನಡೆಯುತ್ತಿದ್ದು, ಜಾತಿ, ಮತದ ಹೆಸರಿನಲ್ಲಿ ಸಮಾಜ ಒಡೆಯದೆ ಸಮಾಜಕಟ್ಟುವ ಕೆಲಸಕ್ಕೆ ನಮ್ಮ ಸಂಘ ಶ್ರಮಿಸಲಿದೆ ಎಂದರು.
ನಮ್ಮದು ಯಾವುದೇ ಜಾತಿ, ರಾಜಕೀಯ ಉದ್ದೇಶದಿಂದ ಸ್ಥಾಪಿತವಾಗಿರುವ ಸಂಘವಲ್ಲ, ಅಹಿಂದ ವರ್ಗದ ನೌಕರರು ಸಮಾಜದ ಎಲ್ಲಾವರ್ಗದಲ್ಲಿ ಸಹಬಾಳ್ವೆಯನ್ನು ಬೆಸೆಯುವ, ನೌಕರರಿಗೆ ಎಲ್ಲರೀತಿಯಲ್ಲೂ ರಕ್ಷಣೆ ನೀಡುವ ಉದ್ದೇಶದಿಂದ ಸ್ಥಾಪನೆ ಮಾಡಲಾಗಿದೆ ಎಂದರು. ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ, ವೃತ್ತಿಕೌಶಲ್ಯತಾ ತರಗತಿ, ಪತ್ತಿನ ಸಹಕಾರ ಸಂಘ, ಆರೋಗ್ಯ ತಪಾಸಣಾ ಶಿಬಿರ ಹೀಗೆ ಹತ್ತು ಹಲವು ಯೋಜನೆಗಳನ್ನು ಅನುಷ್ಠಾನ ಗೊಳಿಸುವುದು ನಮ್ಮ ಧ್ಯೇಯವಾಗಿದೆ ಎಂದರು.
ಉದ್ಘಾಟನೆ: ನಮ್ಮ ಸಂಘದ ಉದ್ಘಾಟನಾ ಸಮಾರಂಭ ಶನಿವಾರ (ಫೆ.8) ಪಟ್ಟಣದ ಕೊಲ್ಲಾಪುರದಮ್ಮನ ದೇವಾಲಯದ ಆವರಣದಲ್ಲಿ ನಡೆಯಲಿದ್ದು ಮೈಸೂರು ಉರಿಗದ್ದಿಗೆ ಪೆದ್ದಲಿಂಗೇಶ್ವರ ಸಂಸ್ಥಾನದ ಜ್ಞಾನಪ್ರಕಾಶ್ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಉದ್ಘಾಟನೆ ಮಾಡಲಿದ್ದಾರೆ. ಶಾಸಕ ಸಿ.ಪಿ.ಯೋಗೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ಸಂಘದ ರಾಜ್ಯಾಧ್ಯಕ್ಷ ಎಸ್.ಎಚ್.ಪ್ರಕಾಶ್ ಪ್ರಾಸ್ಥಾವಿಕ ನುಡಿಗಳನ್ನಾಡಲಿದ್ದಾರೆ.
ಸಂಸದ ಡಿ.ಕೆ.ಸುರೇಶ್, ಜಿ.ಪಂ ಅಧ್ಯಕ್ಷ ಎಚ್.ಸಿ.ರಾಜಣ್ಣ, ಶಿಕ್ಷಣ ಇಲಾಖೆ ಆಯುಕ್ತ ಮಹಮದ್ ಮೊಹಸೀನ್, ಜಿಲ್ಲಾಧಿಕಾರಿ ಡಾ.ವಿಶ್ವನಾಥ್, ಮಾಜಿ ಶಾಸಕ ಸಾದತ್ ಆಲಿಖಾನ್ ಇನ್ನೂ ಮುಂತಾದವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ವಿಷಕಂಠು, ತಾಲೂಕು ಅಧ್ಯಕ್ಷ ಮಹದೇವಯ್ಯ, ತಾಲೂಕು ಕಾರ್ಯದರ್ಶಿ ರಾಜಶೇಖರ್, ಎಸ್.ಎಂ. ನಾಗೇಶ್, ಹನುಮಯ್ಯ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

