ಸರ್ಕಾರದ ಯೋಜನೆ ಜನತೆಗೆ ತಲುಪಿಸಿ
ಚನ್ನಪಟ್ಟಣ: ಸರ್ಕಾರದ ಯೋಜನೆಗಳನ್ನು ಜನತೆಗೆ ತಲುಪಿಸುವ ನೌಕರರ ವರ್ಗ ಸಮರ್ಪಕವಾಗಿ ಕೆಲಸ ಮಾಡಿದ್ದೇ ಆದಲ್ಲಿ ಸರ್ಕಾರದ ಕೀರ್ತಿಯನ್ನು ಎತ್ತಿ ಹಿಡಿಯಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.
ಇಲ್ಲಿನ ಕೊಲ್ಲಾಪುರದಮ್ಮನ ದೇವಾಲಯದ ಆವರಣದಲ್ಲಿ ಅಹಿಂದ ನೌಕರರ ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಸರ್ಕಾರ ಮತ್ತು ಜನರ ನಡುವೆ ನೌಕರರು ಪೂಜಾರಿ ಇದ್ದಂತೆ, ಈ ವರ್ಗದ ಸ್ಪಂದನೆಯ ಮೇಲೆ ಸರ್ಕಾರದ ಕೀರ್ತಿ ಮತ್ತು ಅಪಕೀರ್ತಿ ನಿರ್ಧಾರವಾಗುತ್ತದೆ ಎಂದರು.
ಎಲ್ಲರನ್ನೂ ಒಗ್ಗೂಡಿಸಿ ಸಮಾಜವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯ ಬೇಕೆಂಬುದು ನಮ್ಮ ಸರ್ಕಾರದ ಧ್ಯೇಯ. ಸರ್ಕಾರದ ಯೋಜನೆಗಳನ್ನು ಅನುಷ್ಠಾನ ಗೊಳಿಸಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳನ್ನು ತಲುಪಿಸುವ ಕಾರ್ಯ ನೌಕರರು ಮತ್ತು ಅಧಿಕಾರಿಗಳಿಂದ ಆಗಬೇಕಿದೆ ಎಂದರು.
ಚನ್ನಪಟ್ಟಣ ನನ್ನ ಮೊದಲ ಆಯ್ಕೆ: ಜಿಲ್ಲೆಯಲ್ಲಿ ಯಾವ ಕ್ಷೇತ್ರವನ್ನು ಆಯ್ಕೆ ಮಾಡಿ ಕೊಳ್ಳ ಬೇಕೆಂಬ ಪ್ರಶ್ನೆ ಬಂದಾಗ ನಾನು ಚನ್ನಪಟ್ಟಣವನ್ನೇ ಆಯ್ಕೆ ಮಾಡಿ ಕೊಳ್ಳುತ್ತೇನೆ. ನಾನು ಈ ತಾಲೂಕಿನ ಜನರ ಆಶೀರ್ವಾದದಿಂದ ಬೆಳೆದ ಮನೆಮಗ ಈ ತಾಲೂಕನ್ನು ಅಭಿವೃದ್ಧಿ ಪಡಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಸಿಪಿವೈ ಜತೆ ಚರ್ಚೆ: ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ನಾನು ಯೋಗೇಶ್ವರ್ರನ್ನು ದೂರವಾಣಿ ಮೂಲಕ ಆಹ್ವಾನಿಸಿದ್ದೆ. ಆದರೆ ಪಕ್ಷ ಸಂಘಟನೆ, ಅವರ ಕೆಲಸದ ಒತ್ತಡದಿಂದಾಗಿ ಈ ಸಭೆಯಲ್ಲಿ ಪಾಲ್ಗೊಳ್ಳಲು ಅವರಿಗೆ ಸಾಧ್ಯವಾಗಿಲ್ಲ, ಆದರೂ ನಾನು ತಾಲೂಕಿನ ಅಭಿವೃದ್ಧಿಗೆ ಅವರೊಂದಿಗೆ ಹೆಗಲು ಕೊಡುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಜ್ಞಾನಪ್ರಕಾಶ ಸ್ವಾಮೀಜಿ, ಅಹಿಂದ ಸಂಘಟನೆಯ ರಾಜ್ಯಾಧ್ಯಕ್ಷ ಮುಕಡಪ್ಪ, ಅಹಿಂದ ನೌಕರರ ಸಂಘದ ರಾಜ್ಯಾಧ್ಯಕ್ಷ ಪ್ರಕಾಶ್, ಜಿ.ಪಂ ಅಧ್ಯಕ್ಷ ರಾಜಣ್ಣ, ಜಿಲ್ಲಾಧ್ಯಕ್ಷ ನಾಗೇಂದ್ರ,
ತಾಲೂಕು ಅಧ್ಯಕ್ಷ ಮಹದೇವಯ್ಯ, ರಾಜ್ಯ ಸಂಘಟನಾ ಕಾರ್ಯದರ್ಶಿ ವಿಷಕಂಠು, ಕಾಂಗ್ರೆಸ್ ಮುಖಂಡರಾದ ರಘುನಂದನ್ ರಾಮಣ್ಣ, ಟಿ.ಕೆ.ಯೋಗೇಶ್, ಎ.ಸಿ.ವೀರೇಗೌಡ ಇನ್ನೂ ಮುಂತಾದವರು ಉಪಸ್ಥಿತರಿದ್ದರು. ವೈದ್ಯ ಭಗತ್ರಾಂ, ಹಿಂದುಳಿದ ವರ್ಗಗಳ ಇಲಾಖೆಯ ಮೋಹನ್, ಸಾಹಿತಿ ಭೂಹಳ್ಳಿ ಪುಟ್ಟಸ್ವಾಮಿ, ಎಸ್.ಕೆ.ಸಕಾಫ್, ಮುಂತಾದವರನ್ನು ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

