ಬೆಂಗಳೂರು ಗ್ರಾಮಾಂತರ

ನಾಳೆ ದೇವನಹಳ್ಳಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Published On :

ದೇವನಹಳ್ಳಿ: ದೇವನಹಳ್ಳಿ ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಯಲಿಯೂರು ಗ್ರಾಮದಲ್ಲಿ ಆಯೋಜಿಸಲಾಗಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಎನ್. ರಾಜಗೋಪಾಲ್ ತಿಳಿಸಿದರು.
ಡಾ.ವಿ.ನಾಗೇಶ ಬೆಟ್ಟಕೋಟೆ ಇವರು ಸಮ್ಮೇಳನಾಧ್ಯಕ್ಷರಾಗಿದ್ದಾರೆ ಎಂದೂ ವಿವರಿಸಿದರು. ಮಂಗಳವಾರ ಬೆಳಗ್ಗೆ 8.30ಕ್ಕೆ ತಹಸೀಲ್ದಾರ್ ಡಾ.ಎನ್.ಸಿ. ವೆಂಕಟರಾಜು ರಾಷ್ಟ್ರ ಧ್ವಜಾರೋಹಣ, ತಾಲೂಕು ಕಸಾಪ ಅಧ್ಯಕ್ಷ ಎನ್. ರಾಜಗೋಪಾಲ್ ಸಾಹಿತ್ಯ ಪರಿಷತ್ ಧ್ವಜಾರೋಹಣ ಹಾಗೂ ತಾ.ಪಂ. ಮಾಜಿ ಅಧ್ಯಕ್ಷ ಐ.ಎಸ್. ಆಂಜಿನಪ್ಪ ಕನ್ನಡ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ಜಾನಪದ ಕಲಾ ತಂಡಗಳೊಂದಿಗೆ ಜಿಲ್ಲಾ ಪಂಚಾಯಿತಿ ಸದಸ್ಯೆ ನಳಿನ ಮುನಿರಾಜು ಉದ್ಘಾಟಿಸುವರು. ಸಮ್ಮೇಳನದ ಉದ್ಘಾಟನೆಯನ್ನು ಶಾಸಕ ಪಿಳ್ಳಮುನಿಶಾಮಪ್ಪ ನೆರವೇರಿಸುವರು.
ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ, ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ಮಾಜಿ ಶಾಸಕ ಜಿ.ಚಂದ್ರಣ್ಣ, ಜಿಲ್ಲಾ ಕಸಾಪ ಅಧ್ಯಕ್ಷ ಹುಲಿಕಲ್ ನಟರಾಜ್ ಹಾಗೂ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಚಿ.ಮಾ. ಸುಧಾಕರ್ ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.