ನಿರ್ಮಲ ಭಾರತ ಅಭಿಯಾನ ವಿಶೇಷ ಜಾಗೃತಿ ಸರಣಿಗೆ ತೆರೆ
ರಾಮನಗರ: ಭಾರತ ಸರ್ಕಾರದ ಕ್ಷೇತ್ರ ಪ್ರಚಾರ ನಿರ್ದೇಶನಾಲಯದ ಮೈಸೂರು ಘಟಕ ಹಾಗೂ ರಾಮನಗರ ತಾ.ಪಂ.ನಿಂದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ನಿರ್ಮಲ ಭಾರತ ಅಭಿಯಾನ ಕುರಿತ ವಿಶೇಷ ಜಾಗೃತಿ ಸರಣಿ ಕಾರ್ಯಕ್ರಮಕ್ಕೆ ತೆರೆ ಬಿದ್ದಿದೆ.
ವಿಭೂತಿಕೆರೆ ಗ್ರಾ.ಪಂ. ವ್ಯಾಪ್ತಿಯ ದೇವರ ದೊಡ್ಡಿ ಗ್ರಾಮದಲ್ಲಿ ನಡೆದ ಸಮಾರೋಪ ಸಮಾರಂಭವನ್ನು ತಾ.ಪಂ. ಅಧ್ಯಕ್ಷೆ ಲಕ್ಷ್ಮೀಮಂಜುನಾಥ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಬಡ ಜನರಿಗೆಂದೇ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು. ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಇದೂ ಒಂದಾಗಿದ್ದು, ಜನರು ಆರೋಗ್ಯದಿಂದ ಬದುಕಲು ಸ್ವಚ್ಛ ಬಹುಮುಖ್ಯವಾಗಿದೆ. ಇದಕ್ಕಾಗಿ ಗ್ರಾಮೀಣ ಭಾಗದಲ್ಲಿ ಬಯಲು ಪ್ರದೇಶದಲ್ಲಿ ಮಲ, ಮೂತ್ರ ವಿಸರ್ಜಿಸುವುದನ್ನು ತಡೆಯಲು ಪ್ರತಿ ಮನೆಗೊಂದು ಶೌಚಾಲಯ ನಿರ್ಮಿಸಿಕೊಳ್ಳುವಂತೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು. ಬಯಲಿನಲ್ಲಿ ಮಲ, ಮೂತ್ರ ವಿಸರ್ಜನೆಯಿಂದಾಗುವ ಅನಾಹುತಗಳ ಬಗ್ಗೆ ವಿಶೇಷ ಸರಣಿ ಕಾರ್ಯಕ್ರಮ ಆಯೋಜಿಸಿ, ಸಾಕ್ಷ್ಯಚಿತ್ರಗಳ ಪ್ರದರ್ಶನದ ಮೂಲಕ ಮನವರಿಕೆ ಮಾಡಿಕೊಡಲಾಗಿದೆ. ಇದರಿಂದ ತಿಳಿವಳಿಕೆ ಪಡೆದ ಅನೇಕರು ಶೌಚಾಲಯ ನಿರ್ಮಿಸಿಕೊಳ್ಳಲು ಮುಂದೆ ಬಂದಿದ್ದಾರೆ. ಈ ಕಾರ್ಯಕ್ರಮಕ್ಕೆ ಆರಂಭಿಕ ಯಶಸ್ಸು ದೊರಕಿದ್ದು, ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಪ್ರತಿ ಗ್ರಾಮಗಳಲ್ಲಿಯೂ ಹಮ್ಮಿಕೊಳ್ಳಲಾಗುವುದು ಎಂದು ತಾ.ಪಂ. ಇಒ ಟಿ.ಎಚ್. ವೆಂಕಟೇಶ್ ತಿಳಿಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನರೇ ಅಧಿಕ ಸಂಖ್ಯೆಯಲ್ಲಿರುವ ಗ್ರಾಮಗಳಲ್ಲಿ ಶೌಚಾಲಯ ನಿರ್ಮಾಣ ಯೋಜನೆ ಶೂನ್ಯ ಸಾಧನೆ ಮಾಡಿತ್ತು. ಕೇಂದ್ರ ಕ್ಷೇತ್ರ ಪ್ರಚಾರ ನಿರ್ದೇಶನಾಲಯ ಹಾಗೂ ತಾ.ಪಂ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಪ್ರಯತ್ನದಿಂದಾಗಿ ಶೇಕಡಾ 35ರಷ್ಟು ಮಂದಿ ಶೌಚಾಲಯ ನಿರ್ಮಾಣದ ಶಪಥ ತೊಟ್ಟು ಹೆಸರು ದಾಖಲಿಸಿಕೊಂಡರು. ಇದರೊಂದಿಗೆ ರಾಮನಗರ ತಾಲೂಕಿನ 12 ಗ್ರಾಮಗಳಲ್ಲಿ ನಡೆಸಿದ ವಿಶೇಷ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಶೇಕಡಾ 18 ರಷ್ಟು ಮಂದಿ ಹೆಸರು ದಾಖಲಿಸಿಕೊಳ್ಳುವಷ್ಟು ಪರಿಣಾಮ ಬೀರಿದೆ ಎಂದು ಕ್ಷೇತ್ರ ಪ್ರಚಾರ ನಿರ್ದೇಶನಾಲಯದ ಸಹಾಯಕ ನಿರ್ದೇಶಕಿ ಡಾ.ಟಿ.ಸಿ.ಪೂರ್ಣಿಮಾ ತಿಳಿಸಿದರು. ಕಾರ್ಯಕ್ರಮದಲ್ಲಿ ತಾ.ಪಂ. ಉಪಾಧ್ಯಕ್ಷ ಕೆ.ಎಸ್. ಶಂಕರಯ್ಯ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

