ರೌಡಿ ಪಟ್ಟಿಯಲ್ಲಿರುವ 16 ಮಂದಿ ವಶಕ್ಕೆ, ವಿಚಾರಣೆ
ನೆಲಮಂಗಲ : ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ರೌಡಿ ಪಟ್ಟಿಯಲ್ಲಿರುವ 16 ಜನ ರೌಡಿಗಳನ್ನು ಭಾನುವಾರ ರಾತ್ರಿ ಇಡೀ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿರುವುದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ರಮೇಶ್ ತಿಳಿಸಿದ್ದಾರೆ.
ಬಂದಿತ 16 ರೌಡಿಗಳನ್ನು ಉಮಾಶಂಕರ್, ಜಯರಾಮಯ್ಯ, ಶ್ರೀಧರ್, ರವಿ, ನಟರಾಜನಾಯಕ, ಕೆಂಪೇಗೌಡ, ಲಕ್ಷ್ಮಣಗೌಡ, ಚೇತನ್ಕುಮಾರ್, ಅರಸಪ್ಪ, ಚಂದ್ರಶೇಖರ್, ಮುನಿರಾಜು, ಮೋಹನ್ಕುಮಾರ್, ನಾಗರಾಜು, ಮಂಜುನಾಥ, ನಾಗರಾಜು, ಹೇಮಂತ್ಕುಮಾರ್ ಎಂದು ಗುರುತಿಸಲಾಗಿದೆ.
ತಾಲೂಕಿನ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಕೆಲ ರೌಡಿಗಳು ಮಾರಕಾಸ್ತ್ರ, ರಿವಾಲ್ವರ್ಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಕಾರ್ಯಾಚರಣೆ ನಡೆಸಿದ್ದೇವೆ. ರೌಡಿ ಪಟ್ಟಿಯಲ್ಲಿರುವವರು ಯಾವ ರೀತಿ ಜೀವನ ನಿರ್ವಹಿಸುತ್ತಿದ್ದಾರೆ. ಅವರ ಚಲನ ವಲನಗಳ ಬಗ್ಗೆ ಮಾಹಿತಿ ಪಡೆದು ಅವರು ಉತ್ತಮ ನಡತೆ ಕಾಯ್ದುಕೊಳ್ಳುವಂತೆ ಹಾಗೂ ಶಾಂತಿಗೆ ಭಂಗವನ್ನುಂಟು ಮಾಡಬಾರದು ಎಂದು ಎಚ್ಚರಿಕೆ ನೀಡಿ ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

