ಖಾತ್ರಿ ಯೋಜನೆ ಸದ್ಬಳಕೆಗೆ ಶ್ರಮಿಸಿ
ಚನ್ನಪಟ್ಟಣ: ಗ್ರಾಮೀಣಾಭಿವೃದ್ಧಿಗೆ ಉದ್ಯೋಗ ಖಾತ್ರಿ ಯೋಜನೆ ಅಪಾರ ಕೊಡುಗೆ ನೀಡಿದ್ದು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಈ ಯೋಜನೆಯ ಸದ್ಬಳಕೆಗೆ ಶ್ರಮಿಸ ಬೇಕೆಂದು ಜಿ.ಪಂ ಅಧ್ಯಕ್ಷ ಎಚ್.ಸಿ.ರಾಜಣ್ಣ ಕರೆನೀಡಿದರು.
ತಾಲೂಕಿನ ಮಳೂರು ಪಟ್ಟಣ ಗ್ರಾ.ಪಂ ಆವರಣದಲ್ಲಿ ನಿಎಣ ಮಾಡಿರುವ ಭಾರತ್ ನಿರ್ಮಾಣ್ ಗಾಂಧಿ ಸೇವಾಕೇಂದ್ರದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಗ್ರಾಮದಲ್ಲಿ ಸಮುದಾಯ ಮತ್ತು ವೈಯಕ್ತಿಕವಾದ ಕೆಲಸಗಳಿಗೆ ನರೇಗಾ ಯೋಜನೆ ಹಣಕಾಸು ನೀಡುತ್ತಿದ್ದು ಈ ಯೋಜನೆಯಿಂದಾಗಿ ಗ್ರಾಮೀಣಾಭಿವೃದ್ಧಿಯ ಪರಿಕಲ್ಪನೆಗೆ ಹೊಸ ಆಯಾಮ ದೊರೆತಿದೆ ಎಂದರು.
ಕೃಷಿ, ತೋಟಗಾರಿಕೆ, ಹೈನುಗಾರಿಗೆ, ಜಲಾನಯನ, ಯೋಜನೆಗಳಿಗೆ ಸಹಕಾರ ನೀಡಬಲ್ಲ ವಿಫುಲ ಅವಕಾಶಗಳು ಈ ಯೋಜನೆಯಡಿಯಲ್ಲಿ ರೈತರಿಗೆ ಸಿಗಲಿದ್ದು ಈ ಬಗ್ಗೆ ಜಾಗೃತಿ ಮೂಡಿಸಿ ಯೋಜನೆಯನ್ನು ಫಲಪ್ರದ ಗೊಳಿಸುವ ಜಬಾವ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಯರಂಗ ಮಾತನಾಡಿ, ಕೇಂದ್ರ ಸರ್ಕಾರ ಇತ್ತೀಚಿನ ದಿನಗಳಲ್ಲಿ ಪಂಚಾಯಿತಿಗಳನ್ನು ಸಾಕಷ್ಟು ಬಲಿಷ್ಠ ಗೊಳಿಸುತ್ತಿದ್ದು, ಪಂಚಾಯಿತಿ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿಷ್ಪಕ್ಷಪಾತವಾಗಿ ಯೋಜನೆಯನ್ನು ಜಾರಿಗೊಳಿಸಲು ಶ್ರಮಿಸಬೇಕೆಂದು ತಿಳಿಸಿದರು.
ತಾ.ಪಂ ಸದಸ್ಯ ಚಿನ್ನಗಿರೀಗೌಡ ಮಾತನಾಡಿದರು. ಜಿ.ಪಂ.ಸದಸ್ಯೆ ನಾಗೇಶ್ವರಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಂ.ಬಿ.ಪ್ರೇಮ, ಉಪಾಧ್ಯಕ್ಷ ಶಿವಣ್ಣ, ತಾ.ಪಂ.ಸದಸ್ಯೆ ರಮ್ಯ ಸೇರಿದಂತೆ ಪಂಚಾಯಿತಿ ವ್ಯಾಪ್ತಿಯ ಸದಸ್ಯರು ಉಪಸ್ಥಿತರಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಸಂತಕುಮಾರ್ ಸ್ವಾಗತಿಸಿದರು, ಕಾರ್ಯದರ್ಶಿ ಕೃಷ್ಣ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

