ಬೆಂಗಳೂರು ಗ್ರಾಮಾಂತರ

'16 ರಂದು ಶಿವಕುಮಾರ ಸ್ವಾಮೀಜಿ ಗುರುವಂದನೆ'

Published On :

ರಾಮನಗರ: ಕನಕಪುರದ ಶ್ರೀ ದೇಗುಲ ಮಠದಲ್ಲಿ ತುಮಕೂರಿನ ಸಿದ್ಧಗಂಗಾ ಮಠಾಧೀಶರಾದ ಶತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗುರುವಂದನೆ, ಶ್ರೀ ಇಮ್ಮಡಿ ನಿರ್ವಾಣ ಮಹಾ ಶಿವಯೋಗಿ ಸ್ವಾಮೀಜಿ ಮತ್ತು  ಶ್ರೀ ಇಮ್ಮಡಿ ಮಹಾಲಿಂಗ ಸ್ವಾಮೀಜಿ ಸಂಸ್ಮರಣಾ ಕಾರ್ಯಕ್ರಮ ಫೆ.16ರಂದು ನಡೆಯಲಿದೆ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು.   
ಸುತ್ತೂರು ಮಠಾಧೀಶ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಮ್ಮುಖದಲ್ಲಿ ಕನಕಪುರದ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಶ್ರೀಮಠದ ಆವರಣದಲ್ಲಿ ಅಂದು ಬೆಳಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಜರುಗಲಿದೆ ಎಂದು  ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೆಂಗಳೂರು ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮೀಜಿ, ಸಂಸ್ಮರಣಾ ನುಡಿಗಳನ್ನಾಡುವರು. ಕನಕಪುರದ ಶ್ರೀ ಮರಳೇಗವಿ ಮಠದ ಶ್ರೀ ಮುಮ್ಮಡಿ ಶಿವರುದ್ರ ಸ್ವಾಮೀಜಿ, ಕನಕಪುರ ಶ್ರೀ ಶಿವಗಿರಿ ಕ್ಷೇತ್ರದ ಶ್ರೀ ಅನ್ನದಾನೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸುವರು. ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರವೇರಿಸುವರು ಎಂದರು.
ಸಂಸದ ಡಿ.ಕೆ.ಸುರೇಶ್ ಅವರನ್ನು ಸನ್ಮಾನಿಸಲಾಗುವುದು. ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ವಿ. ಸೋಮಣ್ಣ ಗುರುವಂದನಾ ನುಡಿಗಳನ್ನಾಡುವರು. ಶ್ರೀಕ್ಷೇತ್ರದ ವಸತಿ ಕಟ್ಟಡವನ್ನು ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸುವರು. ದೇಗುಲಪ್ರಭೆ ವಿಶೇಷ ಸಂಚಿಕೆಯನ್ನು ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಬಿಡುಗಡೆ ಮಾಡುವರು. ಎಚ್.ಹನುಮಂತರಾಯಪ್ಪ ಮತ್ತು ಆರ್.ಲಕ್ಷ್ಮಣ್ ಅವರು ಭಾವಚಿತ್ರಗಳನ್ನು ಅನಾವರಣಗೊಳಿಸುವರು ಎಂದು ಶಿವಕುಮಾರ್ ಹೇಳಿದರು.  
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೃಷಿ ಮಾರುಕಟ್ಟೆ ಮತ್ತು ತೋಟಗಾರಿಕೆ ಸಚಿವ ಶಾಮನೂರು ಶಿವಶಂಕರಪ್ಪ, ವಿಧಾನ ಪರಿಷತ್ ಸದಸ್ಯ ಎಂ.ವಿ.ರಾಜಶೇಖರನ್, ಸಿ.ಪಿ.ಯೋ ಗೇಶ್ವರ್, ಎಚ್.ಸಿ. ಬಾಲಕೃಷ್ಣ, ನರೇಂದ್ರಸ್ವಾಮಿ, ಸುಧಾಕರ್ ಸಹಿತ ಶಾಸಕರು ಮತ್ತು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ವಿವರಿಸಿದರು.  
ಸುದೀರ್ಘ ಇತಿಹಾಸಿವಿದೆ: ಸುಕ್ಷೇತ್ರ ದೇಗುಲ ಮಠಕ್ಕೆ ಸುದೀರ್ಘ ಇತಿಹಾಸವಿದ್ದು, ನಡೆದಾಡುವ ದೇವರಾದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಈ ಮಠದ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡುತ್ತಿದ್ದರು. ಹಿಂದಿನ ಶ್ರೀಗಳೊಟ್ಟಿಗೆ ನಿಕಟ ಬಾಂಧವ್ಯ ಹೊಂದಿದ್ದರು. ಅಂತಹ ಪವಾಡ ಪುರುಷರಿಗೆ ಗುರುವಂದನೆ ಸಲ್ಲಿಸುವ ಭಾಗ್ಯ ಕನಕಪುರಕ್ಕೆ ದೊರೆತಿರುವುದು ಪುಣ್ಯವೇ ಸರಿ ಎಂದು ಶಿವಕುಮಾರ್ ಅಭಿಪ್ರಾಯಪಟ್ಟರು.
ಬೆಂಗಳೂರಲ್ಲೂ ಗುರುವಂದನೆ: 12ನೇ ಶತಮಾನದ ಬಸವಣ್ಣ, 16ನೇ ಶತಮಾದ ಯಡಿಯೂರು ಸಿದ್ದಲಿಂಗೇಶ್ವರ ಮತ್ತು ಈ ಶತಮಾನದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ ದೈವಾಂಶ ಸಂಭೂತರಾಗಿದ್ದು, ಸಾಮಾಜಿಕ ಕ್ರಾಂತಿಯನ್ನೇ ನಡೆಸಿದ್ದಾರೆ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 107ನೇ ಗುರುವಂದನಾ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಮುಂದಿನಏಪ್ರಿಲ್ ಮಾಹೆಯಲ್ಲಿ 3 ದಿನ ಆಯೋಜಿಸಲಾಗುವುದು ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದರು. ಗೋಷ್ಠಿಯಲ್ಲಿ ಮುಮ್ಮಡಿ ನಿರ್ವಾಣ ಸ್ವಾಮೀಜಿ, ಶ್ರೀ ಮುಮ್ಮಡಿ ಮಹಾಲಿಂಗ ಸ್ವಾಮೀಜಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.