ಡಿಕೆಶಿ ಸೋದರರು ಜನರ ದಿಕ್ಕು ತಪ್ಪಿಸುತ್ತಿದ್ದಾರೆ
ಕನಕಪುರ: ರಾಮನಗರ ಜಿಲ್ಲೆಯ ಗಡಿಭಾಗದಿಂದಲೇ ನೆರೆ ರಾಜ್ಯಕ್ಕೆ ಅಪಾರ ಪ್ರಮಾಣದ ಕಾವೇರಿ ನೀರು ಪೋಲಾಗಿ ಹೋಗುತ್ತಿದ್ದು, ಮೇಕೇದಾಟು ಯೋಜನೆ ಮೂಲಕ ಬೆಂಗಳೂರುನಗರ, ಗ್ರಾಮಾಂತರ ಜಿಲ್ಲೆಗಳಿಗೆ ನೀರೊದಗಿಸುವ ಬದಲಾಗಿ ಡಿಕೆಶಿ ಸೋದರರು ಎತ್ತಿನಹೊಳೆ ಮೂಲಕ ನೀರನ್ನು ಹರಿಸುವುದಾಗಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ,ಶಾಸಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಅವರು ಕನಕಪುರ ತಾಲೂಕು ಕೊಳ್ಳಿಗನಹಳ್ಳಿ ಗ್ರಾಮದಲ್ಲಿ ಡಾಂಬರೀಕರಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು. ಮಾಜಿ ಶಾಸಕ ಕೆ.ರಾಜು, ಜಿಪಂ ಅಧ್ಯಕ್ಷ ರಾಜಣ್ಣ, ಮಾಜಿ ಜಿಪಂ ಸದಸ್ಯ ಭುಜಂಗಯ್ಯ, ರಾಮು, ಲಕ್ಷ್ಮಣ, ಬನ್ನಿಕುಪ್ಪೆ ರಾಜು, ಸೋಮಶೇಖರ್ ಮೊದಲಾದವರು ಪಾಲ್ಗೊಂಡಿದ್ದರು.
ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿಗಳಾಗಿದ್ದಾಗ ರಾಜ್ಯವು ಸ್ವತಂತ್ರವಾಗಿ ಮೇಕೇದಾಟು ಅಣೆಕಟ್ಟು ನಿರ್ಮಿಸಿದಲ್ಲಿ ತಮಿಳುನಾಡಿಗೆ ಹೆಚ್ಚುವರಿಯಾಗಿ ಹರಿದುಹೋಗುತ್ತಿರುವ ಹತ್ತಾರು ಟಿಎಂಸಿ ನೀರನ್ನು ರಾಮನಗರ, ಬೆಂಗಳೂರು,ತುಮಕೂರು ಜಿಲ್ಲೆಗಳಿಗೆ ಬಳಸಿಕೊಳ್ಳಲು ಸೂಚನೆ ನೀಡಿದ್ದರು.
ಇದನ್ನು ಬಳಸಿಕೊಳ್ಳಲು ವಿಫಲವಾಗಿರುವ ಸರ್ಕಾರ ಈಗ ಎತ್ತಿನಹೊಳೆ ಯೋಜನೆ ಮೂಲಕ ನೀರುಹರಿಸುವ ಪ್ರಹಸನ ನಡೆಸುತ್ತಿದೆ,ಎಂದು ಕುಮಾರಸ್ವಾಮಿ ಟೀಕಿಸಿದರು.
ಹಾರೋಹಳ್ಳಿ ಹೋಬಳಿಯ ಹಲವಾರು ಗ್ರಾಮಗಳಲ್ಲಿ, ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಹತ್ತಾರು ಅಭಿವೃದ್ಧಿಯೋಜನೆ ಕಾಮಗಾರಿಗೆ ಚಾಲನೆ, ಸರ್ಕಾರದ ಸವಲತ್ತುಗಳ ವಿತರಣೆಯನ್ನು ಕುಮಾರಸ್ವಾಮಿ ನೆರವೇರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

