ಇತಿಹಾಸ ಪ್ರಸಿದ್ಧ ಶ್ರೀವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ
ದೊಡ್ಡಬಳ್ಳಾಪುರ: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಪ್ರಸನ್ನ ಲಕ್ಷ್ಮೀವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ಶನಿವಾರ ಮಧ್ಯಾಹ್ನ ವಿಜೃಂಭಣೆಯಿಂದ ನೆರವೇರಿತು. ತೇರಿನಬೀದಿಯಲ್ಲಿ ಹತ್ತಾರು ಸಾವಿರ ಜನ ಈ ಮಹಾಉತ್ಸವಕ್ಕೆ ಸಾಕ್ಷಿಯಾದರು. ಹಲವೆಡೆಯಿಂದ ಆಗಮಿಸಿದ್ದ ಭಕ್ತಾದಿಗಳು ಶ್ರೀಸ್ವಾಮಿಯ ಬೃಹತ್ ಭವ್ಯ ರಥಕ್ಕೆ ಹಣ್ಣು-ಧವನ ಸಮರ್ಪಿಸುವ ಮೂಲಕ ಭಕ್ತಿಭಾವ ಮೆರೆದರು. ರಥೋತ್ಸವ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.
ಸಂಭ್ರಮ: ರಥೋತ್ಸವ ಅಂಗವಾಗಿ ದೇವಾಲಯದಲ್ಲಿ ಸಂಭ್ರಮ ಮನೆ ಮಾಡಿತ್ತು. ದೇವಾಲಯದಲ್ಲಿರುವ ಶ್ರೀಸ್ವಾಮಿಗೆ ವಿಶೇಷ ವಜ್ರಾಂಗಿ ಅಲಂಕಾರ ಮಾಡಲಾಗಿತ್ತು. ವಜ್ರಖಚಿತ ಆಭರಣಗಳಿಂದ ಶ್ರೀಸ್ವಾಮಿಯನ್ನು ಅಲಂಕರಿಸಿದ್ದ ದೃಶ್ಯ ಭಕ್ತಾದಿಗಳ ಆಕರ್ಷಣೆಗೆ ಪಾತ್ರವಾಯಿತು. ದೇವಾಲಯದ ಮೂಲದೇವರಾಗಿರುವ ಲಕ್ಷ್ಮೀಪದ್ಮಾವತಿ ಸಹಿತ ಶ್ರೀವೆಂಕಟೇಶ್ವರ ಸ್ವಾಮಿಗೆ ಕೂಡ ವಿಶೇಷ ಪೂಜಾಲಂಕಾರಗಳು ನಡೆದವು. ಬೆಳಗ್ಗಿನಿಂದಲೂ ಸಾವಿರಾರು ಭಕ್ತಾದಿಗಳು ಬಿಸಿಲಿನಲ್ಲಿ ನಿಂತು ದೇವರ ದರ್ಶನ ಮಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ರಥೋತ್ಸವದ ನಂತರ ಧೂಳ್ಯುತ್ಸವ ನಡೆಯಿತು.
ಹಗಲು ಪರಿಷೆ: ರಥೋತ್ಸವದ ನಂತರದ ದಿನ ಫೆ.16ರ ಭಾನುವಾರ ಹಗಲು ಪರಿಷೆ ನಡೆಯಲಿದೆ. ಸಾವಿರಾರು ಜನ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಸಂಜೆ ಅಶ್ವವಾಹನೋತ್ಸವ, ಮೃಗಯಾತ್ರೋತ್ಸವಗಳು ನಡೆಯಲಿವೆ. ಶ್ರೀನಿವಾಸಗೋಪಾಲ ಭಟ್ಟರ್ ಪ್ರಧಾನ ಅರ್ಚಕತ್ವದಲ್ಲಿ ರಥೋತ್ಸವ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

