ಬೆಂಗಳೂರು ಗ್ರಾಮಾಂತರ

ಜಾತ್ರೆ ಪ್ರಯುಕ್ತ ಅನ್ನಸಂತರ್ಪಣೆ, ನಾಟಕೋತ್ಸವ, ಅರವಂಟಿಕೆ

Published On :

ದೊಡ್ಡಬಳ್ಳಾಪುರ: ಇಲ್ಲಿನ ಸುಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀವೆಂಕಟರಮಣಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀಆಂಜನೇಯಸ್ವಾಮಿ  ಅನ್ನಸಂತರ್ಪಣಾ ಸಮಿತಿ ವತಿಯಿಂದ ಅರಳುಮಲ್ಲಿಗೆ ಬಾಗಿಲು ಆಂಜನೇಯಸ್ವಾಮಿ ದೇವಾಲಯದಲ್ಲಿ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಸಾವಿರಾರು ಭಕ್ತಾದಿಗಳು ಅನ್ನ ಸಂತರ್ಪಣೆಯಲ್ಲಿ ಪ್ರಸಾದ ಸ್ವೀಕರಿಸಿದರು.
ಇಲ್ಲಿನ ದೇವಾಂಗ ಮಂಡಲಿ ನೇತೃತ್ವದಲ್ಲಿ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರ ನೆನಪಿನಲ್ಲಿ ಅರವಂಟಿಕೆ ಕಾರ್ಯಕ್ರಮ ನಡೆಯಿತು. ಅದೇ ರೀತಿ ವಿವಿಧ ಸಂಘಟನೆಗಳಿಂದ, ಭಜನಾಮಂಡಲಿಗಳಿಂದ, ಅರವಂಟಿಕೆ ಸಮಿತಿಗಳಿಂದ ಅರವಂಟಿಕೆ ಕಾರ್ಯಕ್ರಮಗಳು ಏರ್ಪಾಟಾಗಿದ್ದವು.
ನಾಟಕೋತ್ಸವ: ಜಾತ್ರೆ ಅಂಗವಾಗಿ ಜಾತ್ರಾ ಸಾಂಸ್ಕೃತಿಕ ಸಮಿತಿ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಅನಿಕೇತನ ಟ್ರಸ್ಟ್ ಸಹಯೋಗದಲ್ಲಿ ನಾಟಕೋತ್ಸವ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೋಮವಾರ ಸಂಜೆ ಚಾಲನೆ ನೀಡಲಾಯಿತು.
ಉದ್ಘಾಟನಾ ಕಾರ್ಯಕ್ರಮದಲ್ಲಿ ತಾಲೂಕಿನ ಆಯ್ದ ಕಲಾವಿದರುಗಳಿಗೆ ಸನ್ಮಾನಿಸಲಾಯಿತು. ನಂತರ ಹಲವು ನೃತ್ಯಪ್ರತಿಭೆಗಳಿಂದ ಭರತನಾಟ್ಯ, ತಾಲೂಕು ಕಲಾವಿದರ ಸಂಘದ ಕಲಾವಿದರಿಂದ ರಂಗ ದೃಶ್ಯಾವಳಿ, ಶ್ರೀಆಂಜನೇಯ ಕೃಪಾಪೋಷಿತ ನಾಟಕ ಮಂಡಲಿಯಿಂದ ಶ್ರೀಕೃಷ್ಣ ಸಂಧಾನ ಪೌರಾಣಿಕ ನಾಟಕ ನಡೆಯಿತು.
ಕಬಡ್ಡಿ ಪಂದ್ಯಾವಳಿ: ಶ್ರೀವಿನಾಯಕ ಕಬಡ್ಡಿ ಕ್ಲಬ್ ನೇತೃತ್ವದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಖಾಸಗಿ ಆಹ್ವಾನಿತ ಕಬಡ್ಡಿ ಪಂದ್ಯಾವಳಿಗಳಿಗೆ ಚಾಲನೆ ನೀಡಲಾಯಿತು. 2 ದಿನಗಳ ಕಾಲ ನಡೆಯುವ ಕಾರ್ಯಕ್ರಮಕ್ಕೆ ಶಾಸಕ ಟಿ.ವೆಂಕಟರಮಣಯ್ಯ ಚಾಲನೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.