ಬೆಂಗಳೂರು ಗ್ರಾಮಾಂತರ

'ಪತ್ರಿಕಾ ರಂಗ ಅತ್ಯಂತ ಮಹತ್ವದ್ದು'

Published On :

ವಿಜಯಪುರ: ಸರ್ಕಾರದ ಸರಿ ತಪ್ಪುಗಳಿರಬಹುದು, ಸಮಾಜ ಬಾಹಿರ ಕೆಲಸಗಳಿರಬಹುದು, ಯಾವುದೇ ವಿಚಾರಗಳನ್ನು ಪತ್ರಿಕೋದ್ಯಮ ಮುಖಾಂತರ ಸಾರ್ವಜನಿಕರು ತಿಳಿಯುವಂತಾಗಿದೆ ಎಂದು ಪಟ್ಟಣದ ಬಸವ ಕಲ್ಯಾಣ ಮಠದ ಶ್ರೀ ಮಹದೇವ ಸ್ವಾಮಿಗಳು ತಿಳಿಸಿದರು. ಅವರು ಪಟ್ಟಣದ ಎಲ್ಲಮ್ಮ ದೇವಿ ದೇವಾಲಯದ ಆವರಣದಲ್ಲಿ ಏರ್ಪಡಿಸಿದ್ದ ಅಪರಾಧ ವಾಹಿನಿ ಎಂಬ ನೂತನ ಮಾಸಿಕ ಪತ್ರಿಕೆ ಬಿಡುಗಡೆ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡುತ್ತಿದ್ದರು. ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗಗಳಂತೆ ಪತ್ರಿಕಾ ರಂಗವು ಮಹತ್ವವನ್ನು ಪಡೆದಿದೆ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪುರಸಭೆ ಮಾಜಿ  ಅಧ್ಯಕ್ಷ ಎಂ. ಸತೀಶ್ ಕುಮಾರ್ ಮಾತನಾಡಿದರು. ಹಲವಾರು ರಂಗಗಳಲ್ಲಿ ಸೇವೆ ಮಾಡಿದವರನ್ನು ಗುರುತಿಸಿ ಗೌರವಿಸಲಾಯಿತು. ಪುರಸಭಾ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯ ಜೆ.ಎನ್.ಶ್ರೀನಿವಾಸ್, ಸದಸ್ಯ ಮುನಿಚಿನ್ನಿ, ಗಾಣಿರ ಸಂಘದ ಅಧ್ಯಕ್ಷ ಎಲ್. ಗೋವಿಂದರಾಜು, ವಿಜಯಕುಮಾರ್, ಸಮಾಜ ಸೇವಕ ಸಂಪತ್ ಕುಮಾರ್, ಜಿಲ್ಲಾ ಪತ್ರಕರ್ತ ಸಂಘದ ದೇವರಾಜ್, ಸುಬ್ರಮಣಿ, ವಿದ್ಯಾದ್ರಿ ಕಾಲೇಜು ಸಂಸ್ಥಾಪಕ ರಾಮಚಂದ್ರಪ್ಪ, ದೇವಾಲಯದ ಪದಾಧಿಕಾರಿಗಳು, ನಾಗರಿಕರು ಉಪಸ್ಥಿತರಿದ್ದರು.

ಕಾಡಾನೆಗಳನ್ನು ಓಡಿಸಲು ಕಾರ್ಯಾಚರಣೆ
ಮಾಗಡಿ: ರಾಮನಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಸ್. ರವಿಶಂಕರ್, ಸಹಾಯಕ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಕೆ.ಲಿಂಗಪ್ಪ ಅವರ ಮಾರ್ಗದರ್ಶನದಲ್ಲಿ  ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವನದ ನುರಿತ ಸಿಬ್ಬಂದಿಗಳೊಂದಿಗೆ ಮಾಗಡಿ ತಾಲೂಕಿನ ಸಾವನದುರ್ಗದ ಅಭಯಾರಣ್ಯ ಹಾಗೂ ಭಂಟರಕುಪ್ಪೆ ಅರಣ್ಯ ಪ್ರದೇಶಗಳಲ್ಲಿ ಬೀಡು ಬಿಟ್ಟಿರುವ 9 ಕಾಡಾನೆಗಳನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವಕ್ಕೆ ಓಡಿಸಲು ಕಾರ್ಯಾಚರಣೆ ನಡೆಲಾಗುತ್ತಿದೆ.  ಸಾವನದುರ್ಗ ಹಾಗು ಭಂಟರಕುಪ್ಪೆ ಅರಣ್ಯ ಪ್ರದೇಶದ ಅಂಚಿನಲ್ಲಿರುವ ಸುತ್ತಮುತ್ತಲ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು  ಹಾಗೂ ಕಾಡಾನೆ ಓಡಿಸಲು ಸಹಕರಿಸುವಂತೆ ವಲಯ ಅರಣ್ಯಾಧಿಕಾರಿ ಕೆಂಪರಾಜು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.