ವೇಣುಗೋಪಾಲಸ್ವಾಮಿ ಬ್ರಹ್ಮ ರಥೋತ್ಸವ
ದೇವನಹಳ್ಳಿ: ಇಲ್ಲಿನ ಕೋಟೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ವೇಣುಗೋಪಾಲಸ್ವಾಮಿ ಬ್ರಹ್ಮರಥೋತ್ಸವವನ್ನು ದೇವಾಲಯದ ವ್ಯವಸ್ಥಾಪನ ಹಾಗೂ ಜೀರ್ಣೋದ್ಧಾರ ಸಮಿತಿಯವರು ಶನಿವಾರ ಆಯೋಜಿಸಿದ್ದರು. ರಥೋತ್ಸವಕ್ಕೆ ಮುನ್ನ ಶ್ರೀ ರುಕ್ಮಿಣಿ ಸತ್ಯಭಾಮ ಸಮೇತ ವೇಣುಗೋಪಾಲಸ್ವಾಮಿ ಉತ್ಸವ ಮೂರ್ತಿಗಳನ್ನು ದೇವಾಲಯದ ಪ್ರಾಂಗಣದ ಜಗುಲಿಯ ಮೇಲಿರಿಸಿ ಧಾರ್ಮಿಕ ಪೂಜಾ ವಿಧಿಗಳನ್ನು ಜಿಲ್ಲಾಧಿಕಾರಿ ವಿ.ಶಂಕರ್ ದಂಪತಿಗಳು ನಡೆಸಿಕೊಟ್ಟರು. ದೇವಾಲಯದಲ್ಲಿನ ಮೂಲ ವಿಗ್ರಹಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು ಸಾವಿರಾರು ಭಕ್ತರು ಹಣ್ಣುಕಾಯಿ ಸಮರ್ಪಿಸಿ ದೇವರ ದರ್ಶನ ಪಡೆದರು. ಈ ಸಂಧರ್ಭದಲ್ಲಿ ಶಾಸಕ ಪಿಳ್ಳಮುನಿಶಾಮಪ್ಪ, ಧಾರ್ಮಿಕ ದತ್ತಿ ಸಹಾಯಕ ಆಯುಕ್ತೆ ಲಕ್ಷ್ಮಿ, ತಹಸೀಲ್ದಾರ್ ಡಾ.ಎನ್.ಸಿ.ವೆಂಕಟರಾಜು, ಪುರಸಭಾ ಮುಖ್ಯಾಧಿಕಾರಿ ಮಂಜುನಾಥ್, ಪುರಸಭಾ ಸದಸ್ಯರುಗಳು, ಪುರಸಭಾ ಮಾಜಿ ಅಧ್ಯಕ್ಷರಾದ ಎ.ಎನ್.ವಸಂತಬಾಬು, ಸಿ.ಜಗನ್ನಾಥ್, ಪದ್ಮಾವತಮ್ಮ , ಬಿಜೆಪಿ ಮುಖಂಡರಾದ ದೇ.ಸೂ. ನಾಗರಾಜ್, ಪುರಸಭಾ ಮಾಜಿ ಉಪಾಧ್ಯಕ್ಷ ಡಿ.ಎಸ್.ಶ್ರೀಕಂಠರಾವ್, ಡಿ.ಎಸ್.ರಾಜಾರಾವ್ ಇತರ ಗಣ್ಯರು ಭಾಗವಹಿಸಿದ್ದರು.
ಶ್ರೀನಿವಾಸ ಸ್ವಾಮಿ ಬ್ರಹ್ಮರಥೋತ್ಸವ
ಕನಕಪುರ: ಚಿಕ್ಕತಿರುಪತಿ ಎಂದೇ ಪ್ರಖ್ಯಾತವಾದ ಕನಕಪುರ ತಾಲೂಕು ಕಲ್ಲಹಳ್ಳಿಯ ಶ್ರೀ ಶ್ರೀನಿವಾಸ ಸ್ವಾಮಿಯ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಭರತ ಹುಣ್ಣಿಮೆಯಂದು ತಿರುಪತಿಯ ತಿಮ್ಮಪ್ಪನೇ ಕಳ್ಳತನದಲ್ಲಿ ಬಂದು ದರ್ಶನ ನೀಡುತ್ತಾನೆ ಎಂಬ ಪ್ರತೀತಿಯಿದ್ದು ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು ಹಾಗೂ ನೆರೆಯ ತಮಿಳುನಾಡು ರಾಜ್ಯದಿಂದಲೂ ಅಸಂಖ್ಯಾತ ಭಕ್ತರು ಆಗಮಿಸಿ ರಥೋತ್ಸವದಲ್ಲಿ ಶ್ರದ್ಧಾಭಕ್ತಿಗಳಿಂದ ಪಾಲ್ಗೊಂಡರು. ತಹಸೀಲ್ದಾರ್ ಡಾ.ದಾಕ್ಷಾಯಣಿ ಪೂಜೆ ಸಲ್ಲಿಸಿ ತೇರನ್ನು ಎಳೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

