ಲಕ್ಷ್ಮೀನರಸಿಂಹಸ್ವಾಮಿ ಜಾತ್ರಾ ಮಹೋತ್ಸವ ಅದ್ಧೂರಿ ಆಚರಣೆಗೆ ನಿರ್ಧಾರ: ಶಾಸಕ ಬಾಲಕೃಷ್ಣ
ಮಾಗಡಿ: ಸುಗ್ಗನಹಳ್ಳಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಜಾತ್ರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಎಚ್.ಸಿ. ಬಾಲಕೃಷ್ಣ ಮುಜರಾಯಿ ಅಧಿಕಾರಿಗಳಿಗೆ ಕರೆ ಕೊಟ್ಟರು.
ಅವರು ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುಗ್ಗನಹಳ್ಳಿ ಶ್ರೀಲಕ್ಷ್ಮೀನರಸಿಂಹಸ್ವಾಮಿ ಜಾತ್ರಾ ಮಹೋತ್ಸವ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ತಾಲೂಕಿನ ಕುದೂರು ಹೋಬಳಿ ಸುಗ್ಗನಹಳ್ಳಿಯ ಐತಿಹಾಸಿಕ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯವಾಗಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ಆಚರಣೆಯಾಗಬೇಕಿದೆ. ಜಾತ್ರಾ ಮಹೋತ್ಸವದ ಪ್ರಯುಕ್ತ ಜಾನುವಾರುಗಳ ಜಾತ್ರೆಯೂ ಸಹ ಯಶಸ್ವಿಯಾಗಿ ನಡೆಸಲು ಸಭೆಯಲ್ಲಿ ಒಕ್ಕರಲಿನಿಂದ ತೀರ್ಮಾನಿಸಲಾಯಿತು.
ವಿವಿಧ ಭಾಗಗಳಿಂದ ಜಾತ್ರೆಗೆ ಬರುವ ರೈತರಿಗೆ ಹಾಗೂ ಜಾನುವಾರುಗಳಿಗೆ ಅಗತ್ಯ ನೆರಳು, ಕುಡಿಯುವ ನೀರು, ವಿದ್ಯುತ್ ದೀಪದ ವ್ಯವಸ್ಥೆ ಕೈಗೊಳ್ಳಲು ಶಾಸಕರು ಆಡಳಿತ ಮಂಡಳಿಗೆ ತಾಕೀತು ಮಾಡಿದರು.
ಕಂದಾಯ ಇಲಾಖೆಯ ಶಿರಸ್ತೇದಾರ್ ಗುರುಲಿಂಗಯ್ಯ ಜಾತ್ರಾ ಮಹೋತ್ಸವದ ರೂಪರೇಷೆಗಳನ್ನು ಕುರಿತು ಸಭೆಗೆ ವಿವರಿಸಿದರು. ತಾ.ಪಂ. ಮಾಜಿ ಅಧ್ಯಕ್ಷ ಜಿ.ವಿ. ರಾಮಣ್ಣ, ಕಣ್ಣೂರು ಗ್ರಾ.ಪಂ. ಅಧ್ಯಕ್ಷ ಕುಮಾರ್, ದೇವಾಲಯದ ಪಾರುತ್ತೇಗಾರ ಸಂಪತ್ ಕುಮಾರ್, ಅರ್ಚಕ ಸಾರಂಗಪಾಣಿ, ಮುಜಾರಾಯಿ ಗುಮಾಸ್ತ ಚಂದ್ರಶೇಖರ್, ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು ಹಾಗು ಸುಗ್ಗನಹಳ್ಳಿ, ಸುತ್ತಮುತ್ತಲ ಗ್ರಾಮಸ್ಥರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

