ಬೆಂಗಳೂರು ಗ್ರಾಮಾಂತರ

ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿ ಕಾಣಲಿ: ಸೌಮ್ಯ

Published On :

ಸೂಲಿಬೆಲೆ: ಸರ್ಕಾರ ನೇಕಾರ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡುತ್ತಿರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕ ಪ್ರಗತಿಯನ್ನು ಕಾಣಬೇಕು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕಿ ಸೌಮ್ಯ ಕರೆ ನೀಡಿದರು.
ಸೂಲಿಬೆಲೆಗೆ ಸಮೀಪದ ಸುಗುಟೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ನೇಕಾರ ಮಕ್ಕಳಿಗೆ ಸವಲತ್ತು ವಿತರಣಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಗುಂಪು ವಿಮಾ ಯೋಜನೆಯಡಿ ನೇಕಾರ ಮಕ್ಕಳಿಗೆ ತಲಾ  ರು.1,200 ದಂತೆ  ವಿದ್ಯಾರ್ಥಿ ಧನ, ವಾರ್ಷಿಕ ರು.80 ವಿಮಾ ಕಂತು ಪಾವತಿಸಿದರೆ  ಸ್ವಾಭಾವಿಕ ಸಾವಿಗೆ ರು.60 ಸಾವಿರ, ಅಪಘಾತ ಸಾವಿಗೆ ರು.1.50 ಲಕ್ಷ ಹಣ ದೊರೆಯಲಿದೆ.
ನೇಕಾರರ ಕಲ್ಯಾಣ ಯೋಜನೆಯಡಿ ವಿದ್ಯಾರ್ಥಿ ಸಹಾಯಧನ, ಪಠ್ಯ ಪುಸ್ತಕ  ಖರೀದಿಗೆ ಸಹಾಯಧನ, ನಾನಾ ಕಾಯಿಲೆಗಳ ಚಿಕಿತ್ಸೆಗೆ ಹಣದ ಸಹಾಯಧನ ದೊರೆಯಲಿದೆ. ವಿದ್ಯಾರ್ಥಿಗಳು ಹಾಗೂ ನೇಕಾರ ಸಮುದಾಯದ ಪೋಷಕರು ಇದನ್ನು ಬಳಸಿಕೊಳ್ಳಬೇಕು ಎಂದರು.
ಕಾರ್ಯಕ್ರಮವನ್ನು ಆಯೋಜಿಸಿದ್ದ ಅಖಲ ಕರ್ನಾಟಕ ನೇಕಾರ ರಕ್ಷಣಾ ವೇದಿಕೆ ಕಾರ್ಯದರ್ಶಿ ಪ್ರಕಾಶ್ ಮಾತನಾಡಿ, ಕಳೆದ 8 ವರ್ಷಗಳಿಂದ ನೇಕಾರ ಮಕ್ಕಳಿಗೆ ಶಿಕ್ಷಣ ಒದಗಿಸುವ ಸಲುವಾಗಿ ವೇದಿಕೆ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ನೇಕಾರರ ಸಮುದಾಯ ಪ್ರಗತಿ ವೇದಿಕೆಯ ಮುಖ್ಯ ಗುರಿಯಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ವೇದಿಕೆಯ ಅಧ್ಯಕ್ಷ ಎಂ. ಚೌಡಪ್ಪ ಮಾತನಾಡಿದರು. ಚಿಕ್ಕಬಳ್ಳಾಪುರ ಜಿಲ್ಲೆ ವೆಂಕಟಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ ಸುರೇಶ್, ಸದಸ್ಯರಾದ ರತ್ನಮ್ಮ,ಆನಂದ್, ಚಂದ್ರೇಗೌಡ, ನಾರಾಯಣ ಸ್ವಾಮಿ, ಮುನಿರಾಜಪ್ಪ, ಗೋವಿಂದ ರಾಜು ಮೊದಲಾದವರು ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.