ಬೆಂಗಳೂರು ಗ್ರಾಮಾಂತರ

ಜಿಲ್ಲಾ ಕೇಂದ್ರಕ್ಕಾಗಿ ಬೀದಿಗಿಳಿದ ರೈತರು

Published On :

ದೊಡ್ಡಬಳ್ಳಾಪುರ: ಬೆಂ.ಗ್ರಾ.ಜಿಲ್ಲೆಯ ಜಿಲ್ಲಾ ಕೇಂದ್ರವನ್ನಾಗಿ ದೊಡಬಳ್ಳಾಪುರವನ್ನು ಘೋಷಿಸಬೇಕು ಎಂದು ಆಗ್ರಹಿಸಿ ಮಂಗಳವಾರ ತಾಲೂಕಿನ ನೂರಾರು ರೈತರು ಬೀದಿಗಿಳಿದು ಹೋರಾಟ ನಡೆಸಿದರು.
ತಾಲೂಕು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಮತ್ತು ರೈತ ವಿದ್ಯಾರ್ಥಿ ಸೇನೆಯ ನೇತೃತ್ವದಲ್ಲಿ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನಾ ಧರಣಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅನೇಕ ಮುಖಂಡರು, ಜಿಲ್ಲಾ ಕೇಂದ್ರ ದೊಡ್ಡಬಳ್ಳಾಪುರದ ನೈತಿಕ ಹಕ್ಕು. ವಾಸ್ತವದ ಸ್ಥಿತಿಗತಿಗಳನ್ನು ಮರೆ ಮಾಚುವ ಪ್ರಯತ್ನಗಳು ಫಲಕೊಡುವುದಿಲ್ಲ. ಹೊಣೆಯಾಧಾರಿತ ಆರೋಪಗಳಿಲ್ಲದೆ ಹುರುಳಿಲ್ಲದ ಆರೋಪಗಳನ್ನು ಮಾಡುವುದರಲ್ಲಿ ಅರ್ಥವಿಲ್ಲ. ನ್ಯಾಯ ಮತ್ತು ವಸ್ತುಸ್ಥಿತಿ ನಮಗೆ ಮುಖ್ಯ. ಹತಾಶ ಪ್ರಜ್ಞೆಯಿಂದ ಮಾತನಾಡುವುದು ಯಾರಿಗೂ ಶೋಭೆ ತರುವಂತಹುದಲ್ಲ ಎಂದರು.
ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಘೋಷಣೆಗೆ ಸರ್ಕಾರ ಮೀನ-ಮೇಷ ಎಣಿಸುತ್ತಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಜಿಲ್ಲಾ ಕೇಂದ್ರದ ಬೇಡಿಕೆ ನಮ್ಮ ಹಕ್ಕಿನ ಪ್ರತಿಪಾದನೆಯೇ ಹೊರತು ಪ್ರತಿಷ್ಠೆಯ ಪ್ರಶ್ನೆಯಲ್ಲ. ಸಾಂವಿಧಾನಿಕವಾಗಿ ಅಂಕಿ-ಅಂಶಗಳ ಆಧಾರದಲ್ಲಿ ಜಿಲ್ಲಾ ಕೇಂದ್ರ ಘೋಷಣೆಯಾಗಲಿ. ಈ ಬಗ್ಗೆ ಅಧಿಕಾರಿಗಳು ಪಾರದರ್ಶಕ ವರದಿಯನ್ನು ಸರ್ಕಾರಕ್ಕೆ ನೀಡಬೇಕು. ತಪ್ಪಿದಲ್ಲಿ ರೈತ ಸಂಘ ತೀವ್ರ ಹೋರಾಟ ರೂಪಿಸಲಿದೆ ಎಂದು ಎಚ್ಚರಿಕೆ ನೀಡಿದರು.
ಆಗ್ರಹ: ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬಂದು ಪ್ರತಿಭಟನಾಕಾರರ ಅಹವಾಲು ಕೇಳುವ ಸೌಜನ್ಯ ತೋರಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಪ್ರತಿಭಟನೆಯನ್ನು ಲಘುವಾಗಿ ಪರಿಗಣಿಸಿದರೆ ಅದರ ಪರಿಣಾಮ ಗಂಭೀರಸ್ವರೂಪದ್ದಾಗಿರುತ್ತದೆ ಎಂಬುದನ್ನು ಇತಿಹಾಸ ಸಾರಿ ಹೇಳುತ್ತಿದೆ. ಆದಾಗ್ಯೂ ನಿರಂತರ ನಿರ್ಲಕ್ಷ್ಯ ಧೋರಣೆ ವಹಿಸುತ್ತಿರುವ ಪ್ರಭುತ್ವಶಾಹಿ ಈಗಲಾದರೂ ತನ್ನ ಹೊಣೆಗಾರಿಕೆ ಪ್ರದರ್ಶಿಸಬೇಕು ಎಂದು ಆಗ್ರಹಿಸಿದರು. ಧರಣಿ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘಧ ಮುಖಂಡರಾದ  ಸುಲೋಚನಮ್ಮ ಡಾ.ವೆಂಕಟರೆಡ್ಡಿ, ತಾಲೂಕು ಅಧ್ಯಕ್ಷ ಪ್ರಸನ್ನ ನಾಗಸಂದ್ರ, ಹಸಿರು ಸೇನೆ ಅಧ್ಯಕ್ಷ ಕೆ.ಪಿ.ಕುಮಾರ್, ರೈತ ವಿದ್ಯಾರ್ಥಿಸೇನೆ ಅಧ್ಯಕ್ಷ ವಸಂತಗೌಡ, ಜಿಲ್ಲಾ ಕೇಂದ್ರ ಹೋರಾಟ ಸಮಿತಿಯ
ಕೆ.ಎಂ.ಹನುಮಂತರಾಯಪ್ಪ, ಎಂ. ಕೃಷ್ಣಮೂರ್ತಿ, ಹ.ರಾಮಕೃಷ್ಣ ಸೇರಿದಂತೆ ಅನೇಕ ಮುಖಂಡರು ಕಾರ್ಯಕರ್ತರು, ರೈತರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.