ಬೆಂಗಳೂರು ಗ್ರಾಮಾಂತರ

ಹಾಸನದಿಂದಲೇ ದೇವೇಗೌಡರ ಸ್ಪರ್ಧೆ: ಅನಿತಾಕುಮಾರಸ್ವಾಮಿ

Published On :

ಚನ್ನಪಟ್ಟಣ:  ಈ ಬಾರಿಯ ಚುನಾವಣೆಗೆ ದೇವೇಗೌಡರು ಹಾಸನದಿಂದಲೇ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ನಾಯಕಿ ಅನಿತಾಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಖಾಸಗಿ ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಳ್ಳಲು ಪಟ್ಟಣಕ್ಕೆ ಆಗಮಿಸಿದ್ದ ಅವರು ಇದು ಕೊನೆಯ ಚುನಾವಣೆ ಎಂದು ಅವರೇ ಹೇಳಿರುವಾಗ ಕ್ಷೇತ್ರ ಬದಲಿಸುವುದಿಲ್ಲ. ಅಲ್ಲಿನ ಮತದಾರರು ಅವರನ್ನು ಬೇರೆಡೆ ಸ್ಪರ್ಧಿಸಲು ಬಿಟ್ಟು ಕೊಡುವುದಿಲ್ಲ. ಹಾಗಾಗಿ ಅವರು ಕ್ಷೇತ್ರ ಬದಲಿಸುವುದಿಲ್ಲ ಎಂದರು.
ಸ್ಪರ್ಧೆ ಬಗ್ಗೆ ನಿರ್ಧರಿಸಿಲ್ಲ: ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಾನು ನಿರ್ಧರಿಸಿಲ್ಲ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಮಂಡ್ಯ ಕ್ಷೇತ್ರದ ಕಾರ್ಯಕರ್ತರು ನನ್ನನ್ನು ಸ್ಪರ್ಧಿಸುವಂತೆ ಆಹ್ವಾನಿಸುತ್ತಿದ್ದಾರೆ. ಅವರ ಅಭಿಮಾನಕ್ಕೆ ನಾನು ಚಿರಋಣಿ. ಆದರೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದರು.
ಜನರ ಸೇವೆ ಕೈ ಬಿಡುವುದಿಲ್ಲ: ಸೋಲು ಗೆಲುವು ನಮ್ಮ ಕುಟುಂಬಕ್ಕೆ ಹೊಸದಲ್ಲ, ನಾವು ಎಲ್ಲವನ್ನೂ ಸಮಚಿತ್ತದಿಂದ ಸ್ವೀಕರಿಸುತ್ತೇವೆ, ಜನರ ಅಭಿಮಾನ ಅವರು ತೋರುತ್ತಿರುವ ಪ್ರೀತಿ ವಿಶ್ವಾಸವನ್ನು ನಾನು ಯಾವುದೇ ಕಾರಣಕ್ಕೂ ಮರೆಯುವುದಿಲ್ಲ. ಈ ತಾಲೂಕಿನ ಜನರ ಕಷ್ಟು ಸುಖಗಳಿಗೆ ನಿರಂತರವಾಗಿ ನಾನು  ಸ್ಪಂದಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ವಡ್ಡರಹಳ್ಳಿ ರಾಜಣ್ಣ, ನಗರಸಭಾ ಸದಸ್ಯರಾದ ಕಿರಣ್, ಜೆಸಿಬಿ ಲೋಕೇಶ್, ವಿಷಕಂಠು, ವಿದ್ಯಾರ್ಥಿ ಜೆಡಿಎಸ್ ಅಧ್ಯಕ್ಷ ಆಶೀಷ್, ಯುವ ಜೆಡಿಎಸ್ ಅಧ್ಯಕ್ಷ ಜಯಪ್ರಕಾಶ್, ಮಳೂರುಪಟ್ಟಣ ರವಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.