ಜಿಲ್ಲಾ ಕೇಂದ್ರಕ್ಕಾಗಿ ಡಾ.ರಾಜ್ ಅಭಿಮಾನಿಗಳ ಧರಣಿ
ದೊಡ್ಡಬಳ್ಳಾಪುರ: ಬೆಂ.ಗ್ರಾ.ಜಿಲ್ಲೆಗೆ ದೊಡ್ಡಬಳ್ಳಾಪುರ ನಗರವನ್ನು ಜಿಲ್ಲಾ ಕೇಂದ್ರವಾಗಿ ಘೋಷಿಸಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ನಿರಂತರ ಹೋರಾಟ ಗುರುವಾರ ಕೂಡ ತೀವ್ರ ಸ್ವರೂಪದಲ್ಲಿ ನಡೆಯಿತು.
ಜಿಲ್ಲಾ ಕೇಂದ್ರದ ಹಕ್ಕೊತ್ತಾಯದೊಂದಿಗೆ ತಾಲೂಕು ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘ ಮತ್ತು ತಾಲೂಕು ಕನ್ನಡ ಯುವ ಶಕ್ತಿ ನೇತೃತ್ವದಲ್ಲಿ ಹತ್ತಾರು ಕಾರ್ಯಕರ್ತರು ಬೀದಿಗಿಳಿದಿದ್ದರು.
ಪ್ರತಿಭಟನಾ ಮೆರವಣಿಗೆಯೊಂದಿಗೆ ಧರಣಿ ಸ್ಥಳಕ್ಕಾಗಮಿಸಿದ ಪ್ರತಿಭಟನಾಕಾರರು ಸರ್ಕಾರದ ವಿಳಂಬ ನೀತಿ ಮತ್ತು ಅಧಿಕಾರಿಗಳ ದಿಕ್ಕುತಪ್ಪಿಸುವ ಹುನ್ನಾರಗಳ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ತಾಲೂಕಿನ ರೈತಾಪಿ ವರ್ಗ ಸೇರಿದಂತೆ ಎಲ್ಲ ವರ್ಗಗಳ ಸಮಗ್ರ ಹೋರಾಟವಾಗಿ ರೂಪಗೊಂಡಿರುವ ಈ ಚಳವಳಿ ವ್ಯಾಪಕವಾಗಿ ರೂಪಗೊಳ್ಳುತ್ತಿದೆ. ಮೂಲಸೌಕರ್ಯಗಳ ಅಭಿವೃದ್ಧಿ, ಆರೋಗ್ಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗೆ ಪೂರಕವಾಗಿ ಮತ್ತು ನೆಲದ ಅರ್ಹತೆಯ ಮೇಲೆ ಜಿಲ್ಲಾ ಕೇಂದ್ರದ ಘೋಷಣೆಯಾಗಬೇಕು. ಕೇವಲ ಭರವಸೆಗಳಲ್ಲಿ ಅಧಿಕಾರಿಗಳು ದಿಕ್ಕುತಪ್ಪಿಸುತ್ತಿದ್ದಾರೆ. ಇದಕ್ಕೆ ಪೂರಕವಾದ ರಾಜಕೀಯ ಇಚ್ಛಾಶಕ್ತಿಯೂ ಪ್ರಬಲವಾಗಿ ಬೆಳೆಯಬೇಕಿದೆ. ಈ ಹಂತದಲ್ಲಿ ತಾಲೂಕಿನಲ್ಲಿರುವ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಮತ್ತು ವಿವಿಧ ಹಂತಗಳಲ್ಲಿ ಅಧಿಕಾರಸ್ಥ ಹುದ್ದೆಗಳಲ್ಲಿರುವ ಜನಪ್ರತಿನಿಧಿಗಳು ಹೋರಾಟದ ಪರ ದನಿಯೆತ್ತಿ ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಕಣ್ಣೊರೆಸುವ ಹುನ್ನಾರಗಳಿಗೆ ಬೆಲೆ ಕೊಡುವುದಿಲ್ಲ. ಕೂಡಲೇ ನ್ಯಾಯಬದ್ಧ ಬೇಡಿಕೆ ಈಡೇರಬೇಕು ಎಂದು ಆಗ್ರಹಿಸಿದರು. ಹಿರಿಯ ಮುಖಂಡ ಎಸ್.ವಿ.ಕೃಷ್ಣಮೂರ್ತಿ, ಡಾ.ರಾಜ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹ.ರಾಮಕೃಷ್ಣ, ಕನ್ನಡ ಯುವ ಶಕ್ತಿಯ ಮಹದೇವ್, ಬಸವರಾಜು, ಜಿಲ್ಲಾ ಕೇಂದ್ರ ಹೋರಾಟ ಸಮಿತಿ ಮುಖಂಡರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

