ಟಾಸ್ಕ್ ಫೋರ್ಸ್ ಕಾರ್ಯಾಚರಣೆ
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಹಾಗೂ ಬಸನವದೊಡ್ಡಿ ಬಳಿ ನೆರೆಯ ಮಂಡ್ಯ ಜಿಲ್ಲೆಯ ಸೋಮನಹಳ್ಳಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರ ಸುಮಾರು
1 ಟನ್ನಷ್ಟು ಅಪಾಯಕಾರಿ ತ್ಯಾಜ್ಯ ವಿಲೇವಾರಿ ಮಾಡಿರುವುದನ್ನು ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಅಧಿಕಾರಿಗಳು ಖಚಿಪಡಿಸಿದ್ದಾರೆ.
ಟಾಸ್ಕ್ ಫೋರ್ಸ್ ಅಧ್ಯಕ್ಷ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಬಾಲ್ಯ ನಾಯಕ್, ಸಮಿತಿಯ ಕಾರ್ಯದರ್ಶಿ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಅಸೀಫ್ ಖಾನ್ ಪರಿಶೀಲನೆಗೆ ತೆರೆಳಿದ್ದ ಸಂದರ್ಭದಲ್ಲಿ ಬ್ಯಾಟರಿ ತ್ಯಾಜ್ಯದಿಂದ ಉತ್ಪತ್ತಿ ಆದ ಅಪಾಯಕಾರಿ ವಸ್ತುಗಳು ಪತ್ತೆಯಾಗಿವೆ.
ತ್ಯಾಜ್ಯವನ್ನು ಕೆದಕಲಾಗಿ ಅದರಲ್ಲಿ ಸೋಮನಹಳ್ಳಿ ಕೈಗಾರಿಕಾ ಪ್ರದೇಶದ ಎವರೆಡಿ ಪವರ್ ಶೆಲ್ ಡಿವಿಜನ್ಗೆ ಸೇರಿದ ರಶೀದಿಗಳು ಪತ್ತೆಯಾಗಿವೆ. ಈ ಬೆನ್ನಲ್ಲೇ ಸ್ಥಳೀಯ ಅಧಿಕಾರಿಗಳು ಮಂಡ್ಯ ಜಿಲ್ಲೆ ಟಾಸ್ಕ್ ಫೋರ್ಸ್ ಅಧಿಕಾರಿಗಳನ್ನು ಸಂಪರ್ಕಿಸಿ, ಸದರಿ ಕಾರ್ಖಾನೆ ವಿರುದ್ಧ ಜಲ ಕಾಯ್ದೆ ಹಾಗೂ ಅಪಾಯಕಾರಿ ವಸ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಜರುಗಿಸಲು ಕೋರಿದ್ದಾರೆ.
ಬಿಬಿಎಂಪಿ ಮತ್ತು ಕೈಗಾರಿಕಾ ಪ್ರದೇಶಗಳ ತ್ಯಾಜ್ಯ ವಿಲೇವಾರಿಗೆ ರಾಮನಗರವೇ ತೊಟ್ಟಿಯಾಗಿದೆ. ಇದೀಗ ರಾಮನಗರದ ಕಸವನ್ನೇ ಸಿಕ್ಕ ಕಡೆಯಲ್ಲೆಲ್ಲಾ ವಿಲೇವಾರಿ ಮಾಡಿ ಮತ್ತಷ್ಟು ಅವಾಂತರ ತಂದೊಡ್ಡಿರುವುದು ಸರಿಯಲ್ಲ. ಪರಿಸ್ಥಿತಿ ಹೀಗೇ ಮುಂದುವರೆದರೆ ರಾಮನಗರದಲ್ಲಿ ನೈರ್ಮಲ್ಯ ಮರೀಚಿಕೆ ಆಗಬೇಕಾದೀತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

