ದೊಡ್ಡಬಳ್ಳಾಪುರ ಪಿಎಲ್ಡಿ ಬ್ಯಾಂಕ್ಗೆ ವೆಂಕಟೇಶ್ ಬಾಬು ಅಧ್ಯಕ್ಷ
ದೊಡ್ಡಬಳ್ಳಾಪುರ: ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಎಸ್.ಎಲ್. ವೆಂಕಟೇಶ್ಬಾಬು ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಿಎಲ್ಡಿ ಬ್ಯಾಂಕ್ ತಾಲೂಕಿನ ಸಹಕಾರ ಕ್ಷೇತ್ರದಲ್ಲಿ ತನ್ನದೇ ಆದ ಗಣನೀಯ ಪಾತ್ರವನ್ನು ಮೊದಲಿನಿಂದಲೂ ನಿರ್ವಹಿಸಿಕೊಂಡು ಬರುತ್ತಿದೆ. ಕೃಷಿಕರಿಗೆ ಹಲವು ರೀತಿಯಲ್ಲಿ ಸಹಕಾರ ನೀಡುವ ಮತ್ತು ಅವರ ಆರ್ಥಿಕ ಬೆಳವಣಿಗೆಗೆ ಪೂರಕವಾದ ಯೋಜನೆಗಳ ಮೂಲಕ ಸಹಕಾರ ತತ್ವದಡಿಯಲ್ಲಿ ಮಾದರಿ ಬ್ಯಾಂಕ್ ಆಗಿ ರೂಪಗೊಂಡಿದೆ. ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಬ್ಯಾಂಕಿನ ಅಭ್ಯುದಯಕ್ಕೆ ಶ್ರಮಿಸಲಾಗುವುದು ಎಂದರು. ನೂತನ ಅಧ್ಯಕ್ಷರನ್ನು ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ, ದೇವನಹಳ್ಳಿ ಕ್ಷೇತ್ರದ ಶಾಸಕ ಪಿಳ್ಳಮುನಿಶಾಮಪ್ಪ, ಮಾಜಿ ಶಾಸಕ ಜೆ.ನರಸಿಂಹಸ್ವಾಮಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಎನ್.ಹನುಮಂತೇಗೌಡ, ಪಿಎಲ್ಡಿ ಬ್ಯಾಂಕಿನ ಮಾಜಿ ಅಧ್ಯಕ್ಷ ಬಿ.ಸಿ.ನಾರಾಯಣಸ್ವಾಮಿ ಮತ್ತಿತರರು ಅಭಿನಂದಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

