ಬೆಂಗಳೂರು ಗ್ರಾಮಾಂತರ

ಮತದಾರರಿಗೆ ಕೊಟ್ಟ ಮಾತು ಉಳಿಸಿಕೊಳ್ಳುತ್ತೇನೆ: ಎನ್. ನಾಗರಾಜ್

Published On :

ಸೂಲಿಬೆಲೆ: ಹೊಸಕೋಟೆ ತಾಲೂಕಿನ ಸಮಗ್ರ ಅಭಿವೃದ್ಧಿ ಮಾಡಿ ಮತದಾರರಿಗೆ ಚುನಾವಣಿ ವೇಳೆಯಲ್ಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇನೆ ಎಂದು ಶಾಸಕ ಎನ್. ನಾಗರಾಜ್ ಹೇಳಿದರು. ಸೂಲಿಬೆಲೆ ಮುಖ್ಯ ನಿಲ್ದಾಣದ ಬಳಿ  ಗುರುವಾರ ಸಂಜೆ ಹಮ್ಮಿಕೊಂಡಿದ್ದ ಎರಡನೇ ಹಂತದ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಮಾಸಾಶನದ ಮಂಜೂರಾತಿ ಪತ್ರಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಿ ಮಾತನಾಡಿದರು. ಹೊಸಕೋಟೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹತ್ತಾರು ಯೋಜನೆಗಳನ್ನು ಮುಂದಿನ ಐದು ವರ್ಷಗಳಲ್ಲಿ ರೂಪಿಸಿದ್ದು, ಹಂತ ಹಂತವಾಗಿ ಜಾರಿಗೆ ತರಲಾಗುತ್ತದೆ. ಹೊಸಕೋಟೆ ಪುರಸಭೆ ವ್ಯಾಪ್ತಿಯಲ್ಲಿ ಒಳ ಚರಂಡಿ ವ್ಯವಸ್ಥೆಗಾಗಿ ಸಂಸದರ ನಿದಿಯಿಂದ ರು.110 ಕೋಟಿ ಹಣವನ್ನು ನೀಡಿದ್ದು, ಇದೇ ತಿಂಗಳಲ್ಲಿ ಶಂಕುಸ್ಥಾಪನೆ ಕಾರ್ಯ ನಡೆಯಲಿದೆ. ಇದಲ್ಲದೇ ನಾನಾ ಯೋಜನೆಗಳಲ್ಲಿ ರಸ್ತೆಗಳ ಅಭಿವೃದ್ಧಿ, ಚರಂಡಿ ಕಾಮಗಾರಿ ಹಾಗೂ ಕುಡಿಯುವ ನೀರು ವ್ಯವಸ್ಥೆಗಾಗಿ ರು.30 ಕೋಟಿ ಹಣ ಸರ್ಕಾರ ನೀಡಿದೆ. ಸೂಲಿಬೆಲೆ ಪಟ್ಟಣದಲ್ಲಿ ಕುಡಿಯವ ನೀರು ಸೌಲಭ್ಯಕ್ಕಾಗಿ ಕಳೆದ ಕೆಲ ತಿಂಗಳಿಂದ 57 ಕೊಳವೆ ಬಾವಿಗಳನ್ನು ಕೋರೆಯಿಸಿದ್ದು ಎಲ್ಲವೂ ವಿಫಲವಾಗಿದ್ದವು. ಈ ಸಮಸ್ಯೆಯನ್ನು ನೀಗಿಸಲು ಸಂಸದರು ರು.10 ಲಕ್ಷ ಹಣವನ್ನು ಬಿಡುಗಡೆ ಮಾಡಿದ್ದು, ಕೊಳವೆ ಬಾವಿಗಳನ್ನು ಕೊರೆಯಿಸುವ ಕಾರ್ಯ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲರಿಗೆ ಪಡಿತರ ಚೀಟಿಗಳನ್ನು ವಿತರಣೆ ಮಾಡಲಾಗುವುದು ಎಂದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.