ಬೆಂಗಳೂರು ಗ್ರಾಮಾಂತರ

ಶುಲ್ಕ ವಿನಾಯಿತಿ ರದ್ದು; ಖಂಡನೆ

Published On :

ಕನಕಪುರ: ಸಾರ್ವಜನಿಕ ಮುಷ್ಕರಗಳಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಬಾರದು ಎಂಬ ಕಾನೂನನ್ನು ಸರ್ಕಾರ ಜಾರಿಗೊಳಿಸಲು ಹೊರಟಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಿ ಪರಿಣಮಿಸಲಿದೆ ಎಂದು ಎಬಿವಿಪಿ ಜಿಲ್ಲಾ ಸಂಚಾಲಕ ರಘುರಾಂ ಹೇಳಿದ್ದಾರೆ.
ಅವರು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ರದ್ದು ಮಾಡಲು ಸರ್ಕಾರ ಹೊರಡಿಸಿರುವ ಆದೇಶವನ್ನು ಖಂಡಿಸಿ ತಹಸೀಲ್ದಾರ್ ಡಾ.ದಾಕ್ಷಾಯಣಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.
ಬಿಸಿಎಂ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಶುಲ್ಕ ವಿನಾಯತಿ ಪೂರ್ಣ ರದ್ದಾಗಲಿದ್ದು, ಶಾಲಾ ಕಾಲೇಜುಗಳ ಪೂರ್ಣಶುಲ್ಕಗಳನ್ನು ವಿದ್ಯಾರ್ಥಿಗಳೇ ಭರಿಸಬೇಕಾಗುತ್ತದೆ. ಇದರಿಂದ ರಾಜ್ಯದ ಬಡ, ಮಧ್ಯಮ ವರ್ಗದ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಕಷ್ಟವಾಗಲಿದೆ ಎಂದು ಆರೋಪಿಸಿದರು.
ಸರ್ಕಾರ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುಲು ವಿಫಲವಾಗಿದೆ. ಸರ್ಕಾರದ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳು ಸೌಲಭ್ಯಗಳ ಕೊರತೆಯಿಂದ ಬಳಲುತ್ತಿದ್ದಾರೆ. ಅವುಗಳನ್ನು ಸರಿಪಡಿಸದೆ ಈಗಾಗಲೇ ನೀಡಿರುವ ಸೌಲಭ್ಯಗಳನ್ನು ಕಸಿಯಲು ಹೊರಟಿರುವುದು, ವಿದ್ಯಾರ್ಥಿಗಳ ಮೂಲಭೂತ ಹಕ್ಕಿಗೆ ಮಾಡಿದ ವಂಚನೆಯಾಗಿದೆ. ಸಂವಿಧಾನ ವಿರೋಧಿ ಕೃತ್ಯವಾಗಿದೆ ಎಂದು ದೂರಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.