ಬೆಂಗಳೂರು ಗ್ರಾಮಾಂತರ

'3.21 ಕೋಟಿ ಗ್ರಾಪಂ ಅನುದಾನ ದುರುಪಯೋಗ'

Published On :

ದೇವನಹಳ್ಳಿ: ದೇವನಹಳ್ಳಿ ತಾಲೂಕು ಅಣ್ಣೇಶ್ವರ ಗ್ರಾಮ ಪಂಚಾಯಿತಿಗೆ ಅನಿರೀಕ್ಷಿತವಾಗಿ ಬಂದ ರು. 3.21 ಕೋಟಿ ಹಣವನ್ನು ಅನುಮತಿ ಪಡೆಯದೆ ತರಾತುರಿಯಲ್ಲಿ ವೆಚ್ಚಮಾಡುತ್ತಿರುವುದಕ್ಕೆ ಪಂಚಾಯಿತಿ ಸದಸ್ಯ ಮಂಜುನಾಥ್ ಆಕ್ಷೇಪ ವ್ಯಕ್ತಪಡಿಸಿ ಜಿಪಂ ಸಿಇಒಗೆ ದೂರು ನೀಡಿದ್ದಾರೆ.
ಇಲ್ಲಿನ ಅಣ್ಣೇಶ್ವರ ಗ್ರಾಮ ಪಂಚಾಯಿತಿಗೆ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಿಗೆ ಬಾಬತ್ತು ರು. 3.21 ಕೋಟಿ  ಬಂದಿದ್ದು, ಪಂಚಾಯಿತಿ ಅಧ್ಯಕ್ಷರು ಮತ್ತು ಪಿಡಿಒ ಜ.21ರ ಸಾಮಾನ್ಯ ಸಭೆಯಲ್ಲಿ ಒಪ್ಪಿಗೆ ಪಡೆದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರಿಂದ ಅನುಮೋದನೆ ಪಡೆಯದೆ ಕಾಮಗಾರಿಗಳನ್ನು ಮಾಡಿಸುತ್ತಿರುವುದು ಕಾನೂನಿಗೆ ವಿರೋಧವಾಗಿದೆ ಅಲ್ಲದೆ ಲಕ್ಷಾಂತರ ರುಪಾಯಿ ಭ್ರಷ್ಟಾಚಾರ ನಡೆದಿರಿವುದು ಕಂಡು ಬಂದಿದೆ ಎಂದು ಮಂಜುನಾಥ್ ಆರೋಪಿಸಿ ಶುಕ್ರವಾರ ಪಂಚಾಯಿತಿ ಯಲ್ಲಿ ನಡೆದ ಸಭೆಯಲ್ಲೂ ವಿರೋಧ ವ್ಯಕ್ತಪಡಿಸಿದ್ದಾರೆ.
ಅಣ್ಣೇಶ್ವರ ಗ್ರಾಪಂ ರು. 3.21 ಕೋಟಿ ಅನುಮೋದನೆ ಕೊಡಬಾರದು ಎಂದು ಅರ್ಜಿ ಸಲ್ಲಿಸಿದ್ದರೂ ಪಂಚಾಯಿತಿ ಅಧ್ಯಕ್ಷರು ಮತ್ತು ಪಿಡಿಒ ಸಭಾಂಗಣಕ್ಕೆ ಪ್ರೊಜೆಕ್ಟರ್, ಝೆರಾಕ್ಸ್ ಯಂತ್ರ, ಹೊಸ ಕುರ್ಚಿಗಳು, ಹ್ಯಾಂಡಿ ಕ್ಯಾಮರ ಅಲ್ಲದೆ ಈಗಾಗಲೇ ಕಾಮಗಾರಿಗಳಿಗೆ ಮಂಜೂರಾದ ಕೆಲಸವನ್ನು ಮತ್ತೆ ಮಾಡಲು ಹೊರಟಿದ್ದಾರೆ. ಅಲ್ಲದೆ ಅನಧಿಕೃತವಾಗಿ ಲಕ್ಷಾಂತರ ರುಪಾಯಿ ವೆಚ್ಚವಾಗಲಿವೆ ಇದರ ಬಗ್ಗೆ ಸಿಒಡಿ ತನಿಖೆಯಾಗಬೇಕು ತಪ್ಪಿತಸ್ಥರ ಮೇಲೆ ಕಾನೂನಿನ ಕ್ರಮ ಕೈಗೊಳ್ಳಬೇಕು ಎಂದು ಮಂಜುನಾಥ್ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.