ಆರೋಗ್ಯ ಶಿಬಿರ ಇಂದು
ದೊಡ್ಡಬಳ್ಳಾಪುರ: ಇಲ್ಲಿನ ಮಾನಸ ಆಸ್ಪತ್ರೆಯ ನೇತೃತ್ವದಲ್ಲಿ ಮುಸ್ಲಿಂ ಯೂತ್ಸ್ ಅಸೋಸಿಯೋಷನ್ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಫೆ.22ರ ಶನಿವಾರ ಬೆಳಗ್ಗೆ 11 ಗಂಟೆಗೆ ಹಜರತ್ ಸಿಕಂದರ್ ಹೈದರ್ಷಾ ಮದ್ರಸಾ, ಕತ್ತಾಳಿಮಖಾನ್ನಲ್ಲಿ ನಡೆಯಲಿದೆ. ಡಾ.ಅನಿತಾ ಅಶೋಕ್, ಡಾ.ಪ್ರಸಾದ್ ಸಿ.ನಾಗೋಳ್ ನೇತೃತ್ವದಲ್ಲಿ ವಿವಿಧ ಖಾಯಿಲೆಗಳಿಗೆ ಸಂಬಂಧಿಸಿದಂತೆ ಆರೋಗ್ಯ ಸಮಸ್ಯೆಗಳಿಗೆ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಗುವುದು. ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯುವಂತೆ ಪ್ರಕಟಣೆ ತಿಳಿಸಿದೆ.
24ರಂದು ಉಪನ್ಯಾಸ
ರಾಮನಗರ: ಬಸವನಪುರದ ಸರ್ಕಾರಿ ಕಾನೂನು ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಫೆ.24ರ ಮಧ್ಯಾಹ್ನ 2.30ಕ್ಕೆ ಕಾಲೇಜಿನ ಆವರಣದಲ್ಲಿ ರಾಜ್ಯದ 2014-15ನೇ ಸಾಲಿನ ಆಯ-ವ್ಯಯದ ಮೇಲೆ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸರ್ಕಾರಿ ಕಾನೂನು ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಚ್.ಬಿ.ಶಿವಣ್ಣ ಪ್ರಾಸ್ತಾವಿಕ ನುಡಿಗಳನ್ನಾಡುವರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ಶೈಲಜಾ ಸಂವಾದ ಮಂಡನೆ ಮಾಡುವರು ಪ್ರಾಂಶುಪಾಲ ಎ.ಗೋಪಾಲ ಅಧ್ಯಕ್ಷತೆ ವಹಿಸುವರು.
ಆಮ್ ಆದ್ಮಿಗೆ ಸೇರ್ಪಡೆ
ಮಾಗಡಿ: ಬಿಜೆಪಿಯಲ್ಲಿ ಪಕ್ಷ ನಿಷ್ಠೆ ಬೀದಿಪಾಲಾಗಿದೆ. ಕೇವಲ ವ್ಯಕ್ತಿ ಪೂಜೆಯಷ್ಟೆ ನಡೆದಿದ್ದು, ನಿಷ್ಠಾವಂತ ಕಾರ್ಯಕರ್ತರಿಗೆ ಅಲ್ಲಿ ಯಾವುದೇ ರಾಜಕೀಯ ಸ್ಥಾನಮಾನ ಸಿಕ್ಕಲ್ಲ ಎಂದು ಅರಿತು ಉತ್ತಮ ಪಕ್ಷವಾದ ಆಮ್ ಆದ್ಮಿ ಪಕ್ಷ ಸೇರ್ಪಯಾಗಿರುವುದಾಗಿ ಎಂದು ಪಿ.ಎನ್. ಅರುಣ್ಕುಮಾರ್ ತಿಳಿಸಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಮತ್ತು ಕಾಂಗ್ರೆಸ್ ಈ ಎರಡು ಪಕ್ಷಗಳು ಭ್ರಷ್ಟಚಾರದಲ್ಲಿ ಮುಳುಗಿವೆ. ಜನಸೇವೆ ಮರೆತು, ವಂಶ ಪರಂಪರೆ ರಾಜಕೀಯ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಎಎಪಿ ಜಿಲ್ಲಾ ಸಂಚಾಲಕ ಚೇತನ್, ಮುಖಂಡರಾದ ನಾರಾಯಣಗೌಡ, ನಾಗರಾಜು, ಮೂರ್ತಿರಾಜು ಸೇರಿದಂತಮತ್ತಿತರರು ಈ ಸಂದರ್ಭದಲ್ಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

