ಆಹಾರ ಸಂಸ್ಕರಣ ತರಬೇತಿ ಅಂತ್ಯ
ಶ್ರೀರಂಗಪಟ್ಟಣ: ಪಟ್ಟಣದ ನಿಸರ್ಗ ವನದಲ್ಲಿ ರಾಷ್ಟ್ರೀಯ ಆಹಾರ ಸಂಸ್ಕರಣಾ ಮಿಷನ್ ಹಾಗೂ ಕೃಷಿ ಇಲಾಖೆಯ ಪ್ರಾಯೋಜಕತ್ವದಲ್ಲಿ ನಡೆದ ಆರು ವಾರಗಳ ಆಹಾರ ಸಂಸ್ಕರಣಾ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮವನ್ನು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಗಸ್ವಾಮಿ ಉದ್ಘಾಟಿಸಿದರು.
ಭಾರತೀಯ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆ(ಇಡಿಐಐ), ಅಹಮದಾಬಾದ್, ಮಂಡ್ಯ ಜಿಲ್ಲೆಯಲ್ಲಿ ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಉತ್ತೇಜಿಸುವ ಹಾಗೂ ಆಹಾರ ಸಂಸ್ಕರಣಾ ಉದ್ದಿಮೆಯಲ್ಲಿ ತೊಡಗಿಸಿಕೊಳ್ಳುವ ರೈತರು, ಯುವಕರು ಹಾಗೂ ಮಹಿಳೆಯರಿಗೆ ಅಗತ್ಯ ತರಬೇತಿಯೊಂದಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಏರ್ಪಡಿಸಿತ್ತು.
ನಿಸರ್ಗವನ ಮಾಲೀಕ ಸುಂರೇದ್ರ ಮಾಳಗಿ, ಕ್ರೆಡಿಟ್-ಐ ಸಂಸ್ಥೆಯ ಖಜಾಂಚಿ ಎಂ.ಆರ್. ಮಂಜುನಾಥ್, ಚೆನ್ನೈನ ಎಂ.ಎಸ್. ಇನ್ನೋವೇಟಿವ್ ಪ್ಯಾಕೇಜಿಂಗ್ನ ನಿರ್ದೇಶಕ ಸಂದೇಶ್ಕುಮಾರ್ ಭಾಗವಹಿಸಿದ್ದರು. ಕ್ರೆಡಿಟ್-ಐ ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ಡಾ.ಎಂ.ಪಿ. ವರ್ಷ ಇವರು ಕಾರ್ಯಕ್ರಮದ ಮುಖ್ಯ ತರಬೇತುದಾರರಾಗಿದ್ದು, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ತರಬೇತುದಾರರು ಭಾಗವಹಿಸಿ ತಾಲೂಕಿನ ವಿವಿಧ ಭಾಗಗಳಿಂದ ಆಯ್ಕೆ ಮಾಡಲ್ಪಟ್ಟಿದ್ದ 27 ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ವಿವಿಧ ಆಹಾರ ಉತ್ಪನ್ನಗಳ ತಯಾರಿಕೆಗೆ ಸಂಬಂಧಿಸಿದ ಕೌಶಲ್ಯ ತರಬೇತಿಯಲ್ಲದೇ ಅಭ್ಯರ್ಥಿಗಳನ್ನು ಮೈಸೂರು ಜಿಲ್ಲೆಯಲ್ಲಿರುವ ವಿವಿಧ ಆಹಾರ ಉತ್ಪನ್ನ ತಯಾರಿಕಾ ಉದ್ದಿಮೆಗಳಿಗೆ ಕ್ಷೇತ್ರ ಭೇಟಿ ಏರ್ಪಡಿಸಿತ್ತು.
ಕಾರ್ಯಕ್ರಮದ ಮುಕ್ತಾಯ ಸಮಾರಂಭದಲ್ಲಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಅಮರನಾಥ್, ಮಂಡ್ಯದ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಶಾಂತ, ತೋಟಗಾರಿಕಾ ಕ್ಲಿನಿಕ್ನ ವಿಷಯ ತಜ್ಞ ನಾಗರಾಜ್ ಹಾಗೂ ಡಾ.ಎಂ.ಪಿ. ವರ್ಷ ಭಾಗವಹಿಸಿದ್ದರು.
ಆರು ವಾರಗಳ ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

