ಬೆಂಗಳೂರು ಗ್ರಾಮಾಂತರ

ಕಾರ್ಮಿಕನ ಮೇಲೆ ಗಂಭೀರ ಹಲ್ಲೆ: ಕಾರ್ಖಾನೆ ಎದುರು ಪ್ರತಿಭಟನೆ

Published On :

ದೊಡ್ಡಬಳ್ಳಾಪುರ: ಕಾರ್ಮಿಕನೊಬ್ಬನ ಮೇಲೆ ಕಾರ್ಖಾನೆ ಅಧಿಕಾರಿಯೊಬ್ಬ ಹಲ್ಲೆ ನಡೆಸಿದ ಪರಿಣಾಮ ಸ್ಥಳದಲ್ಲೇ ಕುಸಿದು ಬಿದ್ದ ಕಾರ್ಮಿಕ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಇಲ್ಲಿನ ಮುಸಾಶಿ ಇಂಡಿಯಾ ಲಿಮಿಟೆಡ್ ಕಾರ್ಖಾನೆಯಲ್ಲಿ ಶುಕ್ರವಾರ ನಡೆದಿದೆ.
ಘಟನೆ ಸಂಬಂಧ ಆಕ್ರೋಶಗೊಂಡ ಕಾರ್ಮಿಕರು ಕಾರ್ಖಾನೆ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ. ವರ್ಷದ ಹಿಂದೆ ಕಾರ್ಖಾನೆಯಲ್ಲಿ ನೌಕರನಾಗಿ ಬಂದು ಸೇರಿದ್ದ ಸೋಮಶೇಖರ್ ಹಲ್ಲೆಗೊಳಗಾದ ವ್ಯಕ್ತಿ ಎನ್ನಲಾಗಿದ್ದು, ಅಧಿಕಾರಿ ವೆಂಕಟ್ ಎಂಬಾತ ಹಲ್ಲೆ ನಡೆಸಿದ್ದಾರೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಕೌಶಲ್ಯ ತರಬೇತಿಯೊಂದಿಗೆ 6 ತಿಂಗಳೊಳಗೆ ಕಾಯಂಗೊಳಿಸುವ ಭರವಸೆಯೊಂದಿಗೆ ಈ ವ್ಯಕ್ತಿಗೆ ಕೆಲಸ ನೀಡಲಾಗಿತ್ತು. ಆದರೆ ವರ್ಷವಾದರೂ ಈ ಬಗ್ಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ಜೊತೆಗೆ ಇತ್ತೀಚಿಗೆ ನಿಮ್ಮ ಗುತ್ತಿಗೆ ಮುಗಿದಿದೆ. ಕೆಲಸದಿಂದ ತೆಗೆಯುತ್ತೇವೆ ಎಂದು ಹೇಳಲಾಗಿದೆ. ಈ ಬಗ್ಗೆ ಸ್ಪಷ್ಟನೆ ಕೇಳಲು ಆತ ಅಧಿಕಾರಿ ಬಳಿಗೆ ಹೋಗಿದ್ದಾನೆ. ಆಗ ಮಾತಿನ ಚಕಮಕಿ ನಡೆದಿದೆ. ನಂತರ ಗಂಭೀರ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಹಲ್ಲೆಗೊಳಗಾದ ಸೋಮಶೇಖರ್ ಅಲ್ಲೇ ಕುಸಿದು ಬಿದ್ದಿದ್ದು ಆತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ವಿಚಾರ ತಿಳಿದ ಕಾರ್ಮಿಕರನೇಕರು ಕಾರ್ಖಾನೆಯಲ್ಲಿ ನಡೆದಿರುವ ದೌರ್ಜನ್ಯ ವಿರೋಧಿಸಿ ಪ್ರತಿಭಟನೆ ಆರಂಭಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಈ ಬಗ್ಗೆ ಲಿಖಿತ ದೂರು ಕೊಟ್ಟರೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಧರಣಿ ಹಿಂದಕ್ಕೆ ಪಡೆಯಲಾಗಿತ್ತು. ನಂತರ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಧರಣಿ ಆರಂಭವಾಗಿದ್ದು, ಕಾರ್ಮಿಕನಿಗೆ ನ್ಯಾಯ ಸಿಗುವವರೆಗೆ ಧರಣಿ ಹಿಂಪಡೆಯುವ ಮಾತೇ ಇಲ್ಲ ಎಂದು ಮುಖಂಡರು ಸ್ಪಷ್ಟಪಡಿಸಿದ್ದಾರೆ.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.