ಕೊಂಗಾಡಿಯಪ್ಪ ಜನ್ಮದಿನಾಚರಣೆ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದ ಪುರಪಿತೃ ಲೋಕ ಸೇವಾ ನಿರತ ಡಿ.ಕೊಂಗಾಡಿಯಪ್ಪ ಅವರ 153ನೇ ಜನ್ಮದಿನಾಚರಣೆ ಕಾರ್ಯಕ್ರಮ ಫೆ.22ರ ಶನಿವಾರ ನಡೆಯಲಿದೆ. ಇಲ್ಲಿನ ದೇವಾಂಗ ಮಂಡಲಿ ನೇತೃತ್ವದಲ್ಲಿ ಕೊಂಗಾಡಿಯಪ್ಪ ಮುಖ್ಯರಸ್ತೆಯಲ್ಲಿರುವ ಲೋಕ ಸೇವಾನಿರತರ ಪುತ್ಥಳಿಗೆ ಮಾಲಾರ್ಪಣೆ ಮತ್ತು ವಿಶೇಷ ಪೂಜೆ ನಡೆಯಲಿದೆ.
ಅದೇ ರೀತಿ ಇಲ್ಲಿನ ದೊಡ್ಡಬಳ್ಳಾಪುರ ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಸಂಜಯನಗರದಲ್ಲಿರುವ ಕೊಂಗಾಡಿಯಪ್ಪ ಸಮಾಧಿ ಸ್ಥಳದಲ್ಲಿ ಬೆಳಗ್ಗೆ 9.15ಕ್ಕೆ ವಿಶೇಷ ಪೂಜೆ ನಡೆಯಲಿದೆ. ಸಂಜೆ 5 ಗಂಟೆಗೆ ಮುಕ್ತಾಂಭಿಕಾ ರಸ್ತೆಯಲ್ಲಿರುವ ಬಿಸಿಎಂ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಕಾರ್ಯಕ್ರಮ ನಡೆಯಲಿದೆ. ನಿಲಯ ಪಾಲಕ ಎಸ್.ಎನ್.ವಿಜಯೇಂದ್ರ ಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದು, ಲೇಖಕ ಡಾ.ಎ.ಓ.ಆವಲಮೂರ್ತಿ ವಿಚಾರ ಮಂಡನೆ ಮಾಡಲಿದ್ದಾರೆ. ವಿಸ್ತರಣಾಧಿಕಾರಿ ಜಿ.ಸಿ.ನಾಗರಾಜ್ ಭಾಗವಹಿಸಲಿದ್ದಾರೆ. ಆದರೆ ಇಲ್ಲಿನ ನಗರಸಭೆ ಮಾತ್ರ ಪುರಪಿತೃವನ್ನು ಮರೆತಿದೆ. ನಗರಸಭೆ ಅಧಿಕಾರದ ಕನಸಲ್ಲಿ ದಿನದೂಡುತ್ತಿರುವ ನಗರಸಭಾ ಸದಸ್ಯರೂ ಆಡಳಿತಯಂತ್ರವನ್ನು ಈ ನಿಟ್ಟಿನಲ್ಲಿ ಎಚ್ಚರಿಸುವ ಕೆಲಸ ಮಾಡದಿರುವುದು ದುರ್ದೈವ ಎನ್ನಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

