ಬೆಂಗಳೂರು ಗ್ರಾಮಾಂತರ

ಮಾ.8ಕ್ಕೆ ತಾಲೂಕು ಸಾಹಿತ್ಯ ಸಮ್ಮೇಳನ

Published On :

ನಾಗಮಂಗಲ; ಪಟ್ಟಣದಲ್ಲಿ ಫೆ.25 ಮತ್ತು 26 ರಂದು ನಡೆಯಬೇಕಿದ್ದ ತಾಲೂಕು 3ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾ.8 ಮತ್ತು 9ಕ್ಕೆ ಮುಂದೂಡಲಾಗಿದೆ. ಈ ಹಿಂದೆ ನಿಗಧಿಯಾಗಿದ್ದ ಫೆ.25 ಮತ್ತು 26 ದಿನಾಂಕವನ್ನು ಬದಲಾವಣೆ ಮಾಡಿರುವ ಬಗ್ಗೆ ಸಾಹಿತ್ಯ ಆಸಕ್ತರು ಸಾಕಷ್ಟು ವಿರೋಧ ವ್ಯಕ್ತಪಡಿಸಿದರಾದರೂ ಎಲ್ಲರ ಸಹಕಾರದಿಂದ ತಾ. ಸಮ್ಮೇಳನವನ್ನು ಯಶಸ್ವಿ ಮಾಡುವ ಹಿನ್ನೆಲೆಯಲ್ಲಿ ಮಾ.8 ಮತ್ತು 9 ರಂದು ನಿಗಧಿ ಮಾಡಿರುವ ದಿನಾಂಕದಂದು ಸಮ್ಮೇಳನವನ್ನು ನಡೆಸಲು ನಿರ್ಧರಿಸಲಾಗಿದೆ.
ಕವಿಗೋಷ್ಠಿಗೆ ಆಹ್ವಾನ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಮಾ. 8 ಮತ್ತು 9ರಂದು ನಡೆಯಲಿರುವ 3ನೇ ತಾ.ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕವಿಗಳಿಗೆ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕವಿಗೋಷ್ಠಿ ಮತ್ತು ವಿಚಾರಗೋಷ್ಠಿಗಳನ್ನು ಆಯೋಜಿಸಲಾಗಿದೆ. ಕವಿಗಳು, ಸಾಹಿತ್ಯಾಸಕ್ತರು, ತಮ್ಮ ಎರಡು ಸ್ವರಚಿತ ಕವನಗಳನ್ನು ಹಾಗೂ ತಾಲೂಕಿನ ಪ್ರೌಢಶಾಲೆಯ ಆಸಕ್ತ ವಿದ್ಯಾರ್ಥಿಗಳು ಮರೆಯಾಗುತ್ತಿರುವ ಬಾಲ್ಯದ ಖುಷಿಗಳು ವಿಷಯಕ್ಕೆ ಸಂಬಂಧಿಸಿದಂತೆ ವಿಷಯ ಮಂಡಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.