ಕುಡಿವ ನೀರು ಪೂರೈಕೆಗೆ ಅಗತ್ಯ ಕ್ರಮ
ಮಾಗಡಿ: ಕ್ಷೇತ್ರಕ್ಕೆ ಮುಖ್ಯವಾಗಿ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ನುಡಿದರು.
ಅವರು ತಾಲೂಕಿನ ಗುಡ್ಡಹಳ್ಳಿ ಬಳಿ ಸುಮಾರು 16 ಲಕ್ಷ ರು. ವೆಚ್ಚದ ನೂತನ ಓವರ್ ಹೆಡ್ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಾ ಕಳೆದ 3 ವರ್ಷಗಳಿಂದ ಸಮರ್ಪಕ ಮಳೆ ಬೀಳದೆ ಕ್ಷೇತ್ರ ಬರಪೀಡಿತ ಪ್ರದೇಶವಾಗಿದೆ. ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ದಿನೇ ದಿನೇ ಉಲ್ಬಣಗೊಳ್ಳುತ್ತಿರುವುದರಿಂದ ಮುಂದಾಲೋಚಯಿಂದ ಹೋಬಳಿವಾರು ಪಂಚಾಯ್ತಿವಾರು ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದೇನೆ. ನಾಗರಿಕರು ನೀರನ್ನು ಪೋಲು ಮಾಡದೆ
ಮಿತವಾಗಿ ಬಳಸಬೇಕು. ಕ್ಷೇತ್ರದಲ್ಲಿ ಯಾವುದೇ ಕಾಮಗಾರಿ ನಡೆಯಲಿ ಗುತ್ತಿಗೆದಾರರು ಜವಾಬ್ದಾರಿಯಿಂದ ಗುಣಮಟ್ಟದಿಂದ ಕಾಮಗಾರಿ ನಡೆಸುವಂತೆ ಸೂಚಿಸಿರುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯ್ತಿ ಸದಸ್ಯ ವಿಜಯಕುಮಾರ್, ತಾ.ಪಂ. ಉಪಾಧ್ಯಕ್ಷೆ ಭಾರತಿ ಮಹದೇವಯ್ಯ, ಸದಸ್ಯ ಬಿ.ಟಿ. ವೆಂಕಟೇಶ್, ಹಂಚೀಕುಪ್ಪೆ ಗ್ರಾ.ಪಂ. ಅಧ್ಯಕ್ಷೆ ಜಲಜಾ ಬಸವರಾಜು, ಗುಡ್ಡಹಳ್ಳಿ ರಂಗನಾಥ್, ಜಯರಾಮಯ್ಯ ಮೂರ್ತಿ, ಅಪ್ಪಜಿಗೌಡ, ಕೃಷ್ಣಪ್ಪ, ಚಿಲಿಪಿಲಿ ರಾಜು ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

