ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ಪಹಣಿ ತಿದ್ದುಪಡಿ ಆಂದೋಲನ
ಕನಕಪುರ: ಜನರು ಅಗತ್ಯ ಕಾರ್ಯಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಸರ್ಕಾರವೇ ಜನರ ಮನೆ ಬಾಗಿಲಿಗೆ ಬಂದು ಸವಲತ್ತುಗಳನ್ನು ವಿತರಿಸುವ ಕಾರ್ಯ ನಡೆಯಬೇಕೆಂದು ಸಚಿವ ಡಿ.ಕೆ.ಶಿವಕುಮಾರ್ ಅವರ ಮಹದಾಸೆ. ಹೀಗಾಗಿ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ಹೋಬಳಿ ಮಟ್ಟದ ಪಹಣಿ ತಿದ್ದುಪಡಿ ಆಂದೋಲನ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಅವರು ಕನಕಪುರ ತಾಲೂಕು ದೊಡ್ಡಾಲಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ಉಯ್ಯಂಬಳ್ಳಿ ಹೋಬಳಿ ಮಟ್ಟದ ಪಹಣಿ ತಿದ್ದುಪಡಿ ಆಂದೋಲನದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಪಂ ಸದಸ್ಯ ಇಕ್ಬಾಲ್ ಹುಸೇನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಸ್ವೀಕರಿಸಿದ್ದ 1,300 ಅರ್ಜಿಗಳಲ್ಲಿ ದಾಖಲೆಗಳು ಸಮರ್ಪಕವಾಗಿದ್ದ 650 ಪಹಣಿಗಳ ತಿದ್ದುಪಡಿ, ಪೋಡಿಖಾತಾ, ಬದಲಾವಣೆಗಳನ್ನು ನಡೆಸಿ ನೀಡಲಾಯಿತು. ಹೋಬಳಿ ವ್ಯಾಪ್ತಿಯ 1,500 ಜನರಿಗೆ ಸಂಧ್ಯಾಸುರಕ್ಷಾ ಮಂಜೂರಾತಿ ಪತ್ರಗಳ ವಿತರಣೆ ನಡೆಯಿತು. ಗ್ರಾಪಂ ಕಟ್ಟಡ ಶಂಕುಸ್ಥಾಪನೆ, ಕಾಲುಬಾಯಿ ರೋಗದಿಂದ ಮೃತಪಟ್ಟ ರಾಸುಗಳ ಮಾಲೀಕರಿಗೆ ಚೆಕ್ ವಿತರಣೆಗಳನ್ನು ಸಂಸದ ಡಿ.ಕೆ. ಸುರೇಶ್ ನೆರವೇರಿಸಿದರು.
ತಹಸೀಲ್ದಾರ್ ಡಾ.ದಾಕ್ಷಾಯಣಿ, ಜಿಪಂ ಸದಸ್ಯ ಇಕ್ಬಾಲ್ ಹುಸೇನ್, ಮುನಿಹುಚ್ಚೇಗೌಡ, ತಾಪಂ ಅಧ್ಯಕ್ಷೆ ಸಿದ್ಧಿಕಾ ಪರ್ವೀನ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಂ.ಡಿ.ವಿಜಯದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ಕೆ.ಎನ್.ದಿಲೀಪ್, ತಾಪಂ ಮಾಜಿ ಅಧ್ಯಕ್ಷ ಪುರುಷೋತ್ತಮ್, ಕೃಷ್ಣಪ್ಪ, ಜಿಪಂ ಮಾಜಿ ಉಪಾಧ್ಯಕ್ಷೆ ಮಾದೇವಿ, ಗ್ರಾಪಂ ಅಧ್ಯಕ್ಷೆ ಪವಿತ್ರಾ, ಚಿಕ್ಕಸ್ವಾಮಿ, ತಾಪಂ ಸದಸ್ಯರಾದ ಕೃಷ್ಣಪ್ಪ, ರಮೇಶ್, ಸುಕನ್ಯಾರಾಜು, ಶಶಿಕಲಾ, ಶಿವಚಲುವಮ್ಮ, ಪ್ರೇಮಾಜಾನ್ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

